NationalPolitics

ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳಲ್ಲಿ ಜಾತಿ ಗಣತಿ ಮಾಡುತ್ತೇವೆ; ರಾಹುಲ್‌ ಗಾಂಧಿ

ನವದೆಹಲಿ; ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳಲ್ಲಿ ಜಾತಿ ಗಣತಿ ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಈ ಸಭೆಯ ಬಳಿಕ ಅವರು ಸಭೆಯಲ್ಲಿ ಕೈಗೊಂಡು ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕಾರಿ ಸಮಿತಿಯಲ್ಲಿ ಜಾತಿ ಗಣತಿ ಬಗ್ಗೆ ಚರ್ಚೆ ಮಾಡಿದ್ದೇವೆ. ಜಾತಿ ಗಣತಿಯನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದೇವೆ. ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾತಿ ಗಣತಿ ನಡೆಯುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದರು.

Share Post