ವೆಲ್ಲಿಂಗ್ಟನ್: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ 13 ಮಂದಿಗೆ ಗೌರವ ವಂದನೆ ಸಲ್ಲಿಸಲಾಯಿತು. ತಮಿಳುನಾಡಿನ ವೆಲ್ಲಿಂಗ್ಟನ್ ಮದ್ರಾಸ್ ರೆಜಿಮೆಂಟ್ ನಲ್ಲಿ ಮೃತ ಯೋಧರಿಗೆ ತಮಿಳುನಾಡು ಸರ್ಕಾರದಿಂದ ಗೌರವ ವಂದನೆ ಸಲ್ಲಿಸಲಾಯಿತು. ಈ ವೇಳೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡಾ ಇದ್ದರು.