National

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಮಹಿಳೆ ಸ್ಥಿತಿ ಗಂಭೀರ

ನವದೆಹಲಿ: ಇಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಗೆ ಒಳಗಾದ 54 ವರ್ಷದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಛತ್ತರ್‍ಪುರ ಪ್ರದೇಶದಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ವಸಂತ್ ಕುಂಜ್‍ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಈ ಸಂಬಂಧ ಹೇಳಿಕೆ ಪಡೆಯಲು ಮಹಿಳೆ ಆರೋಗ್ಯ ಸ್ಥಿತಿ ಸರಿಯಾಗಿಲ್ಲದ ಕಾರಣ ಘಟನೆ ವಿಚಾರವಾಗಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Share Post