ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ
ನವದೆಹಲಿ; ಸಂಸತ್ ವಿಶೇಷ ಅಧಿವೇಶ ಹೊಸ ಸಂಸತ್ ಕಟ್ಟಡದಲ್ಲಿ ನಡೆಯುತ್ತಿದೆ. ಹೊಸ ಸಂಸತ್ ಕಟ್ಟಡದ ಮೊದಲ ಕಲಾಪದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡನೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿರುವ ಅವರು, ಇದನ್ನು ನಾರಿ ಶಕ್ತಿ ವಂದನ್ ಅಧಿನಿಯಂ ಎಂದು ಕರೆಯಲಾಗುವುದು ಎಂದಿದ್ದಾರೆ.
ನಾರಿಶಕ್ತಿಯಿಂದ ದೇಶದ ಪ್ರಜಾಪ್ರಭುತ್ವ ಮತ್ತಷ್ಟು ಗಟ್ಟಿಯಾಗಲಿದೆ ಎಂದೂ ಅವರು ಹೇಳಿದ್ದಾರೆ.