National

ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ನವದೆಹಲಿ; ಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿದೆ. ಇದೀಗ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ ಬಾಕಿ ಇದೆ. ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆ ಮಾಡಲಾಗಿದೆ. ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ ಇದಾಗಿದೆ. ನಿನ್ನೆ ಲೋಕಸಭೆಯಲ್ಲಿ ಈ ಮಸೂದೆ ಅಂಗೀಕಾರವಾಯಿತು. 454 ಸದಸ್ಯರು ಮಸೂದೆ ಪರವಾಗಿ ಮತ ಚಲಾಯಿಸಿದರೆ, ಕೇವಲ ಇಬ್ಬರು ಮಾತ್ರ ವಿರುದ್ಧವಾಗಿ ಮತ ಚಲಾಯಿಸಿದರು. ಅಸಾದುದ್ದೀನ್ ಓವೈಸಿ ಮತ್ತು ಇಮ್ತಿಯಾಜ್ ಜಲೀಲ್ ಈ ಮಸೂದೆಗೆ ವಿರುದ್ಧವಾಗಿದ್ದಾರೆ.

Share Post