NationalPolitics

ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಘೋಷಣೆ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಕಣಕ್ಕಿಳಿಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶನಿವಾರ ಘೋಷಿಸಿದ್ದಾರೆ. ಜಂಟಿ ರಾಷ್ಟ್ರಪತಿ ಅಭ್ಯರ್ಥಿಯ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಧ್ಯಾಹ್ನ ದೆಹಲಿಯ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರ ನಿವಾಸದಲ್ಲಿ ಭೇಟಿಯಾದ ವಿರೋಧ ಪಕ್ಷದ ನಾಯಕರು ಯಶವಂತ್ ಅವರ ಹೆಸರನ್ನು ಘೋಷಿಸಿದರು.

ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ ೨೯ ಕೊನೆಯ ದಿನಾಂಕವಾಗಿದೆ. ಜುಲೈ 18ರಂದು ಮತದಾನ ನಡೆಯಲಿದೆ. ಜುಲೈ ೨೧ ರಂದು ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ ೨೪ ರಂದು ಕೊನೆಗೊಳ್ಳುತ್ತದೆ. ಮೇ ೨೭ ರಂದು ಯಶವಂತ್ ಸಿನ್ಹಾ ಅವರು  ವಿರೋಧ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.

ಮಾಜಿ ಸರ್ಕಾರಿ ಅಧಿಕಾರಿ ಯಶವಂತ್ ಸಿನ್ಹಾ ಅವರು ಹಿಂದಿನ ಬಿಜೆಪಿ ಸರ್ಕಾರಗಳಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಕಳೆದ ವರ್ಷ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸೇರಿದ್ದರು. ವಿರೋಧ ಪಕ್ಷದ  ಅಭ್ಯರ್ಥಿಯಾಗಿ ತಮ್ಮ ಹೆಸರನ್ನು ಘೋಷಿಸುವ ಕೆಲವೇ ಗಂಟೆಗಳ ಮೊದಲು ಯಶವಂತ್ ಅವರು ಮಂಗಳವಾರ ಪಕ್ಷದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. “ವಿರೋಧ ಪಕ್ಷಗಳ ಒಗ್ಗಟ್ಟಿಗಾಗಿ ಕೆಲಸ ಮಾಡಲು ನಾನು ಪಕ್ಷವನ್ನು ತೊರೆಯಬೇಕಾಗುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

Share Post