ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾನವಚನ ಸ್ವೀಕರಿಸಿದ ಚಂಪೈ ಸೊರೇನ್
ರಾಂಚಿ; ಹೇಮಂತ್ ಸೊರೇನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು ಚಂಪೈ ಸೊರೇನ್ ಅಲಂಕರಿಸಿದ್ದಾರೆ. ಇಂದು ಚಂಪೈ ಸೊರೇನ್ ಅವರು ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಂಚಿಯ ರಾಜಭವನದ ದರ್ಬಾರ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಚಂಪೈ ಸೊರೇನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಹೇಮಂತ್ ಸೊರೆನ್ ಅವರು ಭೂಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ಎರಡು ದಿನಗಳ ಹಿಂದೆ ಅವರನ್ನು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅನಂತರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷ ಶಾಸಕಾಂಗ ಪಕ್ಷದ ನಾಯಕನಾಗಿ ಹಿರಿಯ ನಾಯಕ ಚಂಪೈ ಸೊರೇನ್ ಅವರನ್ನು ಆಯ್ಕೆ ಮಾಡಿತ್ತು. ಚಂಪೈ ಸೊರೇನ್ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಅನುಮತಿ ಕೋರಿದ್ದರು.