NationalNewsPolitics

ಬೆಳಗಾವಿಗೆ ಭೇಟಿ ನೀಡಿದ್ದ ಮಹಾ ಶಾಸಕ

ಬೆಳಗಾವಿ; ಮಹಾರಾಷ್ಟ್ರ ಮತ್ತು ಬೆಳಗಾವಿ ಗಡಿ ವಿವಾದದ ಜೋರಾಗಿದೆ. ಈ ನಡುವೆ ಎನ್ ಸಿಪಿ ಮಹಾ ಶಾಸಕ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ಕೊಟ್ಟು ಹೋಗಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕರ್ಜತ್-ಜಮ್ಕೆಡ್ ಕ್ಷೇತ್ರದ ಎನ್‌ಸಿಪಿ ರೋಹಿತ್ ಪವಾರ್ ಬೆಳಗಾವಿಗೆ ಭೇಟಿ ನೀಡಿದ್ದರು. ಕಳೆದ ರಾತ್ರಿ ಕೊಲ್ಲಾಪುರ- ಕುಗನೊಳ್ಳಿ ಮಾರ್ಗವಾಗಿ ರೋಹಿತ್ ಪವಾರ್ ಬೆಳಗಾವಿಗೆ ಆಗಮಿಸಿದ್ದರು ಎನ್ನಲಾಗಿದೆ. ಅನಾರೋಗ್ಯಕ್ಕೆ ತುತ್ತಾಗಿರುವ ಎಂಇಎಸ್ ಬೆಳಗಾವಿ ನಗರ ಅಧ್ಯಕ್ಷ ದೀಪಕ್ ದಳವಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

Share Post