ಬಿಜೆಪಿಯಿಂದ ಸ್ಪರ್ಧಿಸ್ತಾರಾ ಮುಲಾಯಂ ಕಿರಿಯ ಸೊಸೆ..?
ಲಖನೌ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಾಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಬಿಜೆಪಿಗೆ ಸೇರ್ಪಡೆಯಾಗಿ, ಬಿಜೆಪಿಯಿಂದ ಕಣಕ್ಕಿಳಿಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಮುಲಾಯಂ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿಯಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ.
ಅಪರ್ಣಾ ಸಿಂಗ್ ಯಾದವ್ ೨೦೧೭ರಲ್ಲಿ ಸಮಾಜವಾದಿ ಪಾರ್ಟಿಯಿಂದ ಸ್ಪರ್ಧಿಸಿ ರೀಟಾ ಬಹುಗುಣ ಜೋಷಿ ವಿರುದ್ಧ ಸೋಲನುಭವಿಸಿದ್ದರು. ಅನಂತರ ಸಮಾಜವಾದಿ ಪಕ್ಷದಲ್ಲೇ ಮುಂದುವರೆದಿದ್ದರೂ, ಕೇಂದ್ರ ಸರ್ಕಾರದ ಪರವಾಗಿ ಮಾತನಾಡುತ್ತಿದ್ದರು. ಇದೀಗ ಅವರು ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.