NationalPolitics

ಪ್ರಧಾನಿ ಮೋದಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ನವದೆಹಲಿ;ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಹ ಮೋದಿಯವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇನ್ನು ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭೇಟಿಯಾಗಿರುವುದು ವಿಶೇಷ.

 

ಮೋದಿ ಭೇಟಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿರುವ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದ ಸಂದರ್ಭ ಸಂತ ತೇಜಸ್ಸಿನ ಭಾರತಾಂಬೆಯ ಮಹಾನ್ ಸುಪುತ್ರನ ದರ್ಶನ ಪಡೆದ ಅನುಭವವಾಯಿತು ಎಂದು ಬರೆದುಕೊಂಡಿದ್ದಾರೆ.

Share Post