Politics

ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಳಗಾವಿ: ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಧ್ವನಿಮತದ ಮೂಲಕ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು. ಪ್ರತಿಪಕ್ಷಗಳ ವಿರೋಧದ ನಡುವೆಯೇ ವಿಧೇಯಕವನ್ನು ಧ್ವನಿಮತಕ್ಕೆ ಹಾಕಲಾಯಿತು. ಗದಗದಲದ ನಡುವೆಯೇ ವಿಧೇಕಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು. ವಿಧೇಯಕ ವಿಧಾನಸಭೆಯಲ್ಲಿ ಅಂಗೀಕರಿಸಿದ ನಂತರ, ಹತ್ತು ನಿಮಿಷಗಳ ಕಾಲ ಸದನವನ್ನು ಮುಂದೂಡಲಾಯಿತು.

 

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ 2021

೧. ಬಲವಂತ ವಂಚನೆ ಒತ್ತಾಯ ಹಾಗೂ ಆಮಿಷದ ಮೂಲಕ ಹಾಗೂ ಮದುವೆಯ ಭರವಸೆ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ.
೨. ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಸೇರಿದವರು, ಅಪ್ರಾಪ್ತರು, ಮಹಿಳೆಯರು, ಬುದ್ಧಿಮಾಂದ್ಯರನ್ನು ಮತಾಂತರ ಮಾಡಿದರೆ ಅಂತಹವರಿಗೆ ಕನಿಷ್ಠ 3ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ, ₹ 50,000 ದಂಡ.
೩. ಇತರೆ ವರ್ಗದವರನ್ನು ಮತಾಂತರ ಮಾಡಿದರೆ ಕನಿಷ್ಠ 3ರಿಂದ 5 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹ 25,000 ದಂಡ.
೪. ಸಾಮೂಹಿಕ ಮತಾಂತರ ಮಾಡಿದ ವ್ಯಕ್ತಿಗೆ 3ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹ 1 ಲಕ್ಷ ದಂಡ.
೫. ಮತಾಂತರಗೊಂಡ ವ್ಯಕ್ತಿ ತನ್ನ ಹಿಂದಿನ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಮತಾಂತರವೆಂದು ಪರಗಣಿಸುವುದಿಲ್ಲ.
೬. ಸಾಮೂಹಿಕ ಮತಾಂತರ ಮಾಡಿದ ವ್ಯಕ್ತಿಗೆ 3ರಿಂದ 10 ವರ್ಷಗಳವರೆಗೆ ವಿಸ್ತರಿಸಬಹುದಾದ ಅವಧಿಯ ಜೈಲುಶಿಕ್ಷೆಯಿಂದ, ಇವೆರಡರಲ್ಲಿ ಯಾವುದಾದರ ಒಂದು ಬಗೆಯ ಕಾರಾವಾಸದಿಂದ ದಂಡಿತರಾಗುವರು, ಹಾಗೂ ಅಂತಹವರಿಗೆ ₹ 1 ಲಕ್ಷ ದಂಡ
೭. ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ 5 ಲಕ್ಷ ರೂಪಾಯಿಯವರೆಗೆ ವಿಸ್ತರಿಸಬಹುದಾದ ಯುಕ್ತ ಪರಿಹಾರವನ್ನು ನ್ಯಾಯಾಲಯ ಮಂಜೂರು ಮಾಡತಕ್ಕದ್ದು ಅದು ಜುಲ್ಮಾನೆಗೆ ಹೆಚ್ಚುವರಿಯಾಗಿರತಕ್ಕದ್ದು.
೧೦. ಅಪರಾಧ ಪುನರಾವರ್ತನೆಯಾದರೆ ಐದು ವರ್ಷ ಸೆರೆವಾಸ ಹಾಗೂ ಎರಡು ಲಕ್ಷ ದಂಡ ವಸೂಲಿ.
೧೧. ಕಾನೂನು ಬಾಹಿರ ಮತಾಂತರ ಅಥವಾ ವಿಪರ್ಯಯದ ಏಕ ಮಾತ್ರ ಉದ್ದೇಶಕ್ಕಾಗಿ ನಡೆದ ವಿವಾಹ ಅಸಿಂಧುವಾಗಲಿದೆ.
೧೨. ಮತಾಂತರಗೊಂಡ ವ್ಯಕ್ತಿಯ ಪೋಷಕರು ಒಡಹುಟ್ಟಿದವರು, ಸಹವರ್ತಿಗಳು ಹಾಗೂ ಸಹೋದ್ಯೋಗಿಗಳು ವ್ಯಕ್ತಿ ಮತಾಂತರಗೊಂಡ ಬಗ್ಗೆ ದೂರು ನೀಡಿದರೆ ಎಫ್‌ಐಆರ್‌ ದಾಖಲಿಸಲು ಅವಕಾಶ.
೧೩. ಜಾಮೀನು ರಹಿತ, ಸಂಜ್ಞೇಯ ಅಪರಾಧವಾಗಲಿರುವ ಮತಾಂತರ.

Share Post