ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ; ಕಾಂಗ್ರೆಸ್‌ಗೆ ಮುಖಭಂಗ!
ದೆಹಲಿ; ನಾಲ್ಕು ರಾಜ್ಯಗಳ ವಿಧಾಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಇದರಲ್ಲಿ ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ. ಇಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಆದ್ರೆ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್ ಗಢದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ.
119 ಕ್ಷೇತ್ರಗಳಲ್ಲಿ ರಾಜಸ್ತಾನದಲ್ಲಿ ಬಿಜೆಪಿ 117 ಹಾಗೂ ಕಾಂಗ್ರೆಸ್ ಕೇವಲ 67 ಸ್ಥಾಗಳಲ್ಲಿ ಮುನ್ನಡೆಯಲ್ಲಿದೆ. ಇನ್ನು 90 ಸ್ಥಾನಗಳ ಛತ್ತಿಸ್‌ಗಢದಲ್ಲಿ ಬಿಜೆಪಿ 48 ಹಾಗೂ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ. ಇನ್ನು ಮಧ್ಯಪ್ರದೇಶದಲ್ಲಿ 230 ಕ್ಷೇತ್ರಗಳಿದ್ದು, ಇದರಲ್ಲಿ ಬಿಜೆಪಿ 143 ಕ್ಷೇತ್ರಗಳಲ್ಲಿ ಮುಂದಿದ್ದರೆ, ಕಾಂಗ್ರೆಸ್ 84 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆಯಲ್ಲಿದೆ.