Politics

ಇಂದು ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ

ಬೆಂಗಳೂರು: ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು  ಪ್ರಕಟವಾಗುತ್ತಿದ್ದು, ಮತ ಎಣಿಕೆ ಕಾರ್ಯ ಆರಂಭವಾಗಿದೆ. ರಾಜ್ಯದ ಮೂರು ಪಕ್ಷಗಳ ರಾಜಕೀಯ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮಧ್ಯಾಹ್ನ ಹೊತ್ತಿಗೆ 90 ಅಭ್ಯರ್ಥಿಗಳ ಭವಿಷ್ಯ ಬಹುತೇಕ ಖಚಿತವಾಗಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ತಲಾ 20 ಕ್ಷೇತ್ರಗಳಲ್ಲಿ ಮತ್ತು ಜೆಡಿಎಸ್ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ಅದರ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾ ಕೇಂದ್ರಗಳಲ್ಲಿ ಆರಂಭಗೊಂಡಿದೆ. ಜಿಲ್ಲಾಧಿಕಾರಿಗಳು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಎಣಿಕೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

Share Post