Politics

5 STATES ELECTION: ಇಂದು ಮೊದಲ ಹಂತದ ಮತದಾನ

ಲಖನೌ: ಇಂದು ಪಂಚರಾಜ್ಯಗಳ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಶುರುವಾಗಿದೆ. ಉತ್ತರ ಪ್ರದೇಶದ 11 ಜಿಲ್ಲೆಗಳ ಒಟ್ಟು 58 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಇಂದು ಬೆಳಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಕೇಂದ್ರಗಳತ್ತ ಧಾವಿಸುತ್ತಿದ್ದಾರೆ. ಕೊವಿಡ್‌ ನಿಯಮಗಳನ್ನು ಪಾಲಿಸಿ ಮತದಾನ ಪ್ರಕ್ರಿಯೆ ನಡೆಸಲಾಗುತ್ತಿದೆ. ಎಲ್ಲಾ ಕಡೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇನ್ನು ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಪ್ರಧಾನ ನರೇಂದ್ರ ಮೋದಿ, ಮತದಾರರಿಗೆ ಮನವಿ ಮಾಡಿದಾರೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ.

ʻಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಎಲ್ಲಾ ಮತದಾರರು ಕೊವಿಡ್‌ ನಿಯಮಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸಬೇಕೆಂದು ಮನವಿ ಮಾಡುತ್ತೇವೆ. ನೆನಪಿಡಿ – ಮೊದಲು ಮತದಾನ ಬಳಿಕ ಉಪಹಾರ!’ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

Share Post