ಸಿಎಂ ಪತ್ನಿ ವಿರುದ್ಧ ಭೂಅಕ್ರಮದ ಆರೋಪ
ಮೈಸೂರು; ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿಬಂದಿದೆ.. ಈ ಬಗ್ಗೆ ಆರ್‌ಟಿಐ ಕಾರ್ಯಕರ್ತ ಗಂಗರಾಜು ಆರೋಪ ಮಾಡಿದ್ದು, ರಾಜ್ಯಪಾಲರಿಗೆ ದೂರು ನೀಡಲು ಚಿಂತನೆ ನಡೆಸಿದ್ದಾರೆ.. ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳೋದಾಗಿ ಅವರು ಹೇಳಿದ್ದಾರೆ..
ಈ ಬಗ್ಗೆ ಮಾತನಾಡಿರುವ ಗಂಗರಾಜು ಅವರು, ಕೆಆರ್ಎಸ್ ರಸ್ತೆಯಲ್ಲಿನ ಗಣೇಶ್ ದೀಕ್ಷಿತ್ ಎಂಬುವವವರಿಗೆ ಸೇರಿದ್ದ ಸರ್ವೆ ನಂ. 445ರ 20 ಗುಂಟೆ ಜಾಗವನ್ನು ಪಾರ್ವತಿ ಸಿದ್ದರಾಮಯ್ಯ ಅವರು 1.85 ಕೋಟಿ ರೂಪಾಯಿಗೆ ಖರೀದಿ ಮಾಡಿದ್ದರು. 2023ರ ಸೆಪ್ಟೆಂಬರ್ 29ರಂದು ತಮ್ಮ ಹೆಸರಿಗೆ ಈ ಜಾಗವನ್ನು ನೋಂದಣಿ ಮಾಡಿಸಿಕೊಂಡಿದ್ದರು.. 21,771,99 ಚದರಡಿ ಜಾಗವನ್ನು ರಿಜಿಸ್ಟರ್ ಮಾಡಿಸಲಾಗಿತ್ತು. ಆದ್ರೆ ಅದರಲ್ಲಿ 8,998 ಚದರಡಿ ಜಾಗ ರಸ್ತೆ ಮತ್ತು ಪೈಪ್ ಲೈನ್‌ಗೆಂದು ಮೂಲ ಮಾಲೀಕ ಗಣೇಶ್ ಮುಡಾಗೆ ಬಿಟ್ಟು ಕೊಟ್ಟಿದ್ದರು. ಕೈಗಾರಿಕೆಯಿಂದ ವಸತಿ ಉದ್ದೇಶಕ್ಕೆ ಪರಿವರ್ತನೆಯಾಗುವ ವೇಳೆ ಈ ಜಾಗ ಬಿಟ್ಟುಕೊಡಲಾಗಿತ್ತು.. ಆದ್ರೆ ಸಿಎಂ ಪತ್ನಿಯವರು ರಸ್ತೆ ಮತ್ತು ಪೈಪ್ ಲೈನ್‌ಗೆ ಬಿಟ್ಟುಕೊಟ್ಟಿದ್ದ ಜಾಗ ಸೇರಿಸಿ ರಿಜಿಸ್ಟರ್ ಮಾಡಿಸಿಕೊಂಡಿದ್ದರು ಎಂದು ಗಂಗರಾಜು ಆರೋಪ ಮಾಡಿದ್ದಾರೆ.. ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಹಾಕಿ ಮಾಹಿತಿ ಪಡೆದುಕೊಂಡಿದ್ದು, ನಾನು ಅರ್ಜಿ ಹಾಕುತ್ತಿದ್ದಂತೆ ಎಚ್ಚೆತ್ತಿರುವ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು, 2024ರ ಆಗಸ್ಟ್ 31ರಂದು ಮತ್ತೆ ರಿಜಿಸ್ಟರ್ ತಿದ್ದುಪಡಿ ಮಾಡಿಸಿದ್ದು, ಮುಡಾ ಜಾಗವನ್ನು ಬಿಟ್ಟು ಇನ್ನುಳಿದ 12,782 ಚದರಡಿ ಜಾಗಕ್ಕೆ ಮಾತ್ರ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ ಎಂದು ಗಂಗರಾಜು ತಿಳಿಸಿದ್ದಾರೆ..
ಹೀಗಾಗಿ ಈ ವಿಚಾರವಾಗಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ರಾಜ್ಯಪಾಲರಿಗೆ ದೂರು ನೀಡುವ ಚಿಂತನೆ ನಡೆಸಲಾಗುತ್ತದೆ ಎಂದು ಗಂಗರಾಜು ತಿಳಿಸಿದ್ದಾರೆ..