Amith Sha in Mysore; ಮೈಸೂರಿನಲ್ಲಿ ಅಮಿತ್ ಹೈ ವೋಲ್ಟೇಜ್ ಮೀಟಿಂಗ್!
ಮೈಸೂರು; ಕಳೆದ ರಾತ್ರಿಯೇ ಮೈಸೂರಿಗೆ ಆಗಮಿಸಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith sha), ಇಂದು ಬೆಳಗ್ಗೆ ಮೈಸೂರಿಗೆ ಬಂದಿಳಿಸಿದ್ದಾರೆ. ಅದ್ಯ ಅವರು ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ (private hotel). ಉಪಾಹಾರ ಸೇವಿಸಿದ ಮೇಲೆ ಅಮಿತ್ ಶಾ ಅವರು ವಿವಿಧ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ; Kumaraswamy; ಕುಮಾರಸ್ವಾಮಿ ಈ 6 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಗೆಲ್ತಾರಂತೆ!
ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಡುವ ಅಮಿತ್ ಶಾ;
ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಡುವ ಅಮಿತ್ ಶಾ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮೊದಲು ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಅನಂತರವೇ ಮುಂದಿನ ಕಾರ್ಯ ಚಟುವಟಿಕೆಗಳನ್ನು ಮಾಡಲಿದ್ದಾರೆ. ಈಗಾಗಲೇ ಅಮಿತ್ ಶಾ ಅವರಿಗೆ ಬಿಜೆಪಿ ನಾಯಕರಿಂದ ಸ್ವಾಗತ ಸಿಕ್ಕಿದೆ. ಅಮಿತ್ ಶಾ ಅವರು ಬಿಜೆಪಿ ನಾಯಕರೊಂದಿಗೆ ಇಂದು ಬೆಳಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡೇಶ್ವರಿ ದರ್ಶನ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.
ನೇರವಾಗಿ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುವ ಅಮಿತ್ ಶಾ;
ನೇರವಾಗಿ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುವ ಅಮಿತ್ ಶಾ; ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಅಮಿತ್ ಶಾ ಅವರು ರಸ್ತೆ ಮಾರ್ಗವಾಗಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ. ಅಲ್ಲಿಂದ ಅವರು ಹೆಲಿಕಾಪ್ಟರ್‌ನಲ್ಲಿ ಸುತ್ತೂರಿಗೆ ತೆರಳುತ್ತಾರೆ. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿರುವ ಅಮಿತ್ ಶಾ, ಮಧ್ಯಾಹ್ನ 1.30ಕ್ಕೆ ಮಠದಲ್ಲಿಯೇ ಊಟ ಸೇವಿಸಲಿದ್ದಾರೆ. ಅನಂತರ ಮಧ್ಯಾಹ್ನ 2.30ರ ವೇಳೆಗೆ ಮೈಸೂರಿನ ಖಾಸಗಿ ಹೋಟೆಲ್‌ಗೆ ಹಿಂತಿರುಗಲಿದ್ದಾರೆ.
ಇದನ್ನೂ ಓದಿ; Citizenship Amendment Act; ಚುನಾವಣೆಗೆ ಮೊದಲು CAA ಜಾರಿ; ಅಮಿತ್ ಶಾ
ಮಧ್ಯಾಹ್ನ 2.40ಕ್ಕೆ ಬಿಜೆಪಿ ಪ್ರಮುಖರ ಜತೆ ಸಭೆ;
ಮಧ್ಯಾಹ್ನ 2.40ಕ್ಕೆ ಬಿಜೆಪಿ ಪ್ರಮುಖರ ಜತೆ ಸಭೆ; ಸುತ್ತೂರು ಜಾತ್ರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಅಮಿತ್ ಶಾ ಅವರು ಮೈಸೂರಿಗೆ ಬಂದಿದ್ದಾರೆ. ಆದ್ರೆ ಅವರು ಇಂದು ಮಧ್ಯಾಹ್ನ 2.40ಕ್ಕೆ ಬಿಜೆಪಿ ನಾಯಕರ ಸಭೆ ಮಾಡಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಯಡಿಯೂರಪ್ಪ ಹೊರತುಪಡಿಸಿ ಬಹುತೇಕ ಬಿಜೆಪಿ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೇಳುವ ಪ್ರಕಾರ ಈಗಾಗಲೇ ಅಮಿತ್ ಶಾ ಅವರ ಬಳಿ ಗೆಲ್ಲುವ ಅಭ್ಯರ್ಥಿಗಳ ಲಿಸ್ಟ್ ಇದೆ. ಈ ಬಗ್ಗೆ ಈಗಾಗಲೇ ಹಲವಾರು ಬಾರಿ ಚರ್ಚೆಯಾಗಿದೆ. ಆದ್ರೆ ರಾಜ್ಯದಲ್ಲಿ ಗೆಲುವಿನ ರಣತಂತ್ರ ಹೆಣೆಯುವುದರ ಬಗ್ಗೆ ಹೆಚ್ಚು ಚರ್ಚೆಯಾಗಲಿದೆ. ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡುವುದು, ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುವ ಕುರಿತು ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ. ನಾಯಕರಿಗೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಇದನ್ನೂ ಓದಿ; ED Raids; ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್‌ರೆಡ್ಡಿ ಮನೆ ಮೇಲೆ ಇಡಿ ದಾಳಿ
ಕುಮಾರಸ್ವಾಮಿ ಕೂಡಾ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ;
ಕುಮಾರಸ್ವಾಮಿ ಕೂಡಾ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ; ಅಮಿತ್ ಶಾ ಅವರ ಸಭೆಯಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿಯುವರು ಕೂಡಾ ಪಾಲ್ಗೊಳ್ಳುವ ಸಾಧ್ಯತೆ ಇದೆ. ಯಾಕಂದ್ರೆ, ಜೆಡಿಎಸ್‌ಗೆ ಸೀಟು ಹಂಚಿಕೆ ಆಗಿಲ್ಲ. ಜೆಡಿಎಸ್ ನಾಯಕರು ಆರು ಕ್ಷೇತ್ರಗಳನ್ನು ಕೇಳುತ್ತಿದ್ದಾರೆ. ಆದ್ರೆ ಬಿಜೆಪಿ ಮೂರರಿಂದ ನಾಲ್ಕು ಕ್ಷೇತ್ರ ಬಿಟ್ಟುಕೊಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಇಂದು ಅಂತಿಮ ತೀರ್ಮಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಇಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕುತೂಹಲದ ದಿನವಾಗಿದೆ. ಏನು ತೀರ್ಮಾನ ಆಗಲಿದೆ ಅನ್ನೋದು ಇಂದೇ ಬಹಿರಂಗವಾಗದಿದ್ದರೂ, ಒಳಗಿದ್ದವರಿಂದ ಒಂದಷ್ಟು ಮಾಹಿತಿಗಳು ಸಂಜೆಯ ವೇಳೆ ಹೊರಬೀಳುವ ಸಾಧ್ಯತೆ ಅಂತೂ ಇದ್ದೇ ಇದೆ.