ನಾಳೆ ಬೆಂಗಳೂರಿನಲ್ಲಿ ಅಮಿತ್ ಶಾ ಸಮಾವೇಶ; ಚೆನ್ನಪಟ್ಟಣದಲ್ಲಿ ರೋಡ್ ಶೋ..
ಬೆಂಗಳೂರು; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ ಬೆಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ ಆರಂಭಿಸಲಿದ್ದಾರೆ.. ಲೋಕಸಭಾ ಚುನಾವಣೆ ಘೋಷಣೆಯಾದ ಮೇಲೆ ಅಮಿತ್ ಶಾ ಅವರು ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಆಗಮಿಸುತ್ತಿದ್ದು, ದಕ್ಷಿಣ ಭಾರತದಲ್ಲಿ ಅಮಿತ್ ಶಾ ಈ ಬಾರಿಯ ಮೊದಲ ಚುನಾವಣಾ ಸಮಾವೇಶ ಇದಾಗಿದೆ. ನಾಳೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅರಮನೆ ಮೈದಾನದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿದೆ.
ಇದನ್ನೂ ಓದಿ; ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ ಕಾಂಗ್ರೆಸ್; ಸುಪ್ರೀಂನಿಂದ ಬಿಗ್ ರಿಲೀಫ್!
5 ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಸಮಾವೇಶ;
ಐದು ಲೋಕಸಭಾ ಕ್ಷೇತ್ರಗಳನ್ನು ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ಮಾಡಲಾಗುತ್ತಿದೆ.. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಕಾರ್ಯಕರ್ತರು ಅರಮನೆ ಮೈದಾನದಲ್ಲಿ ಸೇರಲಿದ್ದಾರೆ.. ಇದಾದ ಮೇಲೆ ಅವರು ಸಂಜೆ 5 ಗಂಟೆಯವರೆಗೂ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಕ್ಷೇತ್ರಗಳ ಪ್ರಮುಖರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ.. ಎಲ್ಲಾ ಅಸಮಾಧಾನಗಳನ್ನು ಬಗೆಹರಿಸುವ ಪ್ರಯತ್ನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ..
ಬೆಳಗ್ಗೆ ಕೋರ್ ಕಮಿಟಿ ಸದಸ್ಯರ ಜೊತೆ ಉಪಾಹಾರ;
ಇನ್ನು ನಾಳೆ ಬೆಳಗ್ಗೆ 9 ಗಂಟೆಗೆ ಬಿಜೆಪಿ ಹಾಗೂ ಜೆಡಿಎಸ್‌ನ ಕೋರ್ ಕಮಿಟಿ ಸದಸ್ಯರ ಜೊತೆ ಸಭೆ ನಡೆಸಲಿದ್ದಾರೆ.. ಉಪಾಹಾರ ಸಭೆ ಇದಾಗಿದ್ದು, ರಾಜ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.. ಈ ಸಭೆಯಲ್ಲಿ ಬಿಜೆಪಿಯ ಹಲವು ನಾಯಕರು ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ನಾಳೆ ಸಂಜೆ ಚನ್ನಪಟ್ಟಣದಲ್ಲಿ ರೋಡ್ ಶೋ;
ನಾಳೆ ಸಂಜೆ 6 ಗಂಟೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಯಲಿದೆ. ಅಮಿತ್ ಶಾ ನೇತೃತ್ವದಲ್ಲಿ ಬೃಹತ್ ರೋಡ್ ಶೋ ನಡೆಸಲಾಗುತ್ತಿದ್ದು, ಇದರಲ್ಲಿ ಕುಮಾರಸ್ವಾಮಿ ಕೂಡಾ ಭಾಗವಹಿಸಲಿದ್ದಾರೆ.
ಇಂದು ರಾತ್ರಿಯೇ ಬೆಂಗಳೂರಿಗೆ ಆಗಮನ;
ಅಮಿತ್ ಶಾ ಅವರು ನಾಳೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ.. ರಾತ್ರಿ 11 ಗಂಟೆಗೆ ಅವರು ಬೆಂಗಳೂರು ವಿಮಾನ ನಿಲ್ದಾಣದಕ್ಕೆ ಬಂದಿಳಿಯಲಿದ್ದಾರೆ.. ನಂತರ ಅವರು ಖಾಸಗಿ ಹೋಟೆಲ್ ನಲ್ಲಿ ತಂಗಲಿದ್ದಾರೆ ಎಂದು ತಿಳಿದುಬಂದಿದೆ..
ಇದನ್ನೂ ಓದಿ; ಬಿಸಿಲಲ್ಲಿ ನೀವು ಮಾಡುವ ಮಿಸ್ಟೇಕ್ ಕ್ಯಾನ್ಸರ್‌ಗೆ ಕಾರಣವಾಗುತ್ತೆ ಹುಷಾರ್!