BengaluruPolitics

ಶೀಘ್ರದಲ್ಲೇ ಅಂಗನವಾಡಿ ಕಾರ್ಯಕರ್ತೆಯ ಗೌರವಧನ ಹೆಚ್ಚಳ; ಹೆಬ್ಬಾಳ್ಕರ್‌

ಬೆಂಗಳೂರು; ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದರು.

ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೇ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ; ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Share Post