ಉತ್ತರಪ್ರದೇಶ : BJP ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳೋದು ನಮ್ಮ ಮೊದಲ ಗುರಿ – ಓವೈಸಿ
ಲಕ್ನೌ : ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣೆಯ ಕಾವು ಊತ್ತರಪ್ರದೇಶದಲ್ಲಿ ಹೆಚ್ಚಾಗುತ್ತಿದೆ. ಪಕ್ಷಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕಾರ್ಯಗಳನ್ನು ಶುರು ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು ನಮ್ಮ ಪಕ್ಷದ ಮೊದಲ ಗುರಿಯಾಗಿದೆ ಎಂದು ಓವೈಸಿ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ಕೊಟ್ಟ ಸಂದರ್ಶನದಲ್ಲಿ ಹೀಗೆ ಮಾತನಾಡಿದ್ದಾರೆ.
ತಾವು ಸ್ಪರ್ಧಿಸುವ ನೂರು ಸ್ಥಾನಗಳಲ್ಲಿ ತಮ್ಮ ಪಕ್ಷವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ನಾವು ಅಧಿಕಾರಕ್ಕೆ ಬರುತ್ತೀವಿ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಸಾದುದ್ದೀನ್, ಚುನಾವಣೆಗೆ ಮುಂಚೆ ಯಾವುದೇ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ, ಜಾತಿ-ಧರ್ಮದ ನಡುವೆ ತಾರತಮ್ಯ ಮಾಡದ ವ್ಯಕ್ತಿ, ಪಕ್ಷ ನಮಗೆ ಬೇಕು ಎಂದು ಹೇಳಿದ್ದಾರೆ.