Ashok chauhan; ಕಾಂಗ್ರೆಸ್ ಪಕ್ಷಕ್ಕೆ ಅಶೋಕ್ ಚೌಹಾಣ್ ಗುಡ್ ಬೈ
ಮುಂಬೈ; ಕಾಂಗ್ರೆಸ್ ಗೆ ಮತ್ತೊಂದು ದೊಡ್ಡ ಹೊಡೆತ ಉಂಟಾಗಿದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟಿದ್ದಾರೆ. ಜೊತೆಗೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸ್ಥಿತಿ ಶೋಚನೀಯವಾಗಿದೆ.
‘ಇಂಡಿಯಾ’ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್!;
ಬಿಜೆಪಿಯನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಹಲವು ಪಕ್ಷಗಳು ಸೇರಿ ಇಂಡಿಯಾ ಮೈತ್ರಿಕೂಟ ರಚನೆ ಮಾಡಿದ್ದವು. ಅದಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಂಚಾಲಕರನ್ನಾಗಿ ಮಾಡಲಾಗಿತ್ತು. ಆದ್ರೆ ಮೈತ್ರಿಕೂಟದಿಂದ ಒಬ್ಬೊಬ್ಬರೇ ಜಾರಿಕೊಳ್ಳುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಏಕಾಂಗಿ ಸ್ಪರ್ಧೆ ಮಾಡುತ್ತೇವೆ ಎಂದಿದ್ದಾರೆ. ಇತ್ತ ಮೈತ್ರಿಕೂಟಕ್ಕೆ ಕಾರಣರಾಗಿದ್ದ ನಿತೀಶ್ ಕುಮಾರ್ ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದಾರೆ.
ಇನ್ನು ಎಎಪಿ ಕೂಡಾ ದೆಹಲಿ ಹಾಗೂ ಪಂಜಾಬ್ ನಲ್ಲಿ ಏಕಾಂಗಿ ಸ್ಪರ್ಧೆ ಮಾಡೋದಾಗಿ ಹೇಳಿದೆ.ಹೀಗಿರುವಾಗಲೇ ಕಾಂಗ್ರೆಸ್ ಗೆ ಮತ್ತೊಂದು ದೊಡ್ಡ ಹೊಡೆತ ಉಂಟಾಗಿದೆ. ಈಗ ಮಹಾರಾಷ್ಟ್ರದ ಪ್ರಮುಖ ನಾಯಕ ಅಶೋಕ್ ಚೌಹಾಣ್ ಅವರು ಕೂಡಾ ಕಾಂಗ್ರೆಸ್ ತೊರದಿದ್ದಾರೆ. ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಶೋಕ್ ಚೌಹಾಣ್ ಅವರು ಮಹಾರಾಷ್ಟ್ರದಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದರು. ಅವರೇ ಕಾಂಗ್ರೆಸ್ ತೊರೆದಿದ್ದಾರೆ. ಇನ್ನೂ ಒಂದಷ್ಟು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ.