NationalPolitics

ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ; ಸಂಜೆ ಕೇಜ್ರಿವಾಲ್‌ ರಾಜೀನಾಮೆ

ನವದೆಹಲಿ; ಅಬಕಾರಿ ಹಗರಣದ ಹಿನ್ನೆಲೆಯಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.. ಸಂಜೆ 4.30ಕ್ಕೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರನ್ನು ಭೇಟಿಯಾಗಲಿರುವ ಕೇಜ್ರಿವಾಲ್‌ ರಾಜೀನಾಮೆ ಪತ್ರವನ್ನು ಹಸ್ತಂತರ ಮಾಡಲಿದ್ದಾರೆ..
ಇನ್ನು ಇದಕ್ಕೂ ಮೊದಲು ಇಂದು ಬೆಳಗ್ಗೆ ಅರವಿಂದ ಕೇಜ್ರಿವಾಲ್‌ ಅವರ ನಿವಾಸದಲ್ಲಿ ಎಎಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು.. ಈ ಸಭೆಯಲ್ಲಿ ಅತಿಶಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.. ದೆಹಲಿ ಮದ್ಯನೀತಿ ಹಗರಣದ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳಿಂದ ಕೇಜ್ರಿವಾಲ್‌ ಜೈಲಿನಲ್ಲಿದ್ದರು.. ಸುಪ್ರೀಂ ಕೋರ್ಟ್‌ ಸೆಪ್ಟೆಂಬರ್ 13 ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಬೇಲ್‌ ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ಅವರು, ಕೋರ್ಟ್‌ ತೀರ್ಪು ಕೊಟ್ಟಿದೆ.. ಈಗ ಜನರ ತೀರ್ಪು ಬೇಕಾಗಿದೆ.. ಹೀಗಾಗಿ ರಾಜೀನಾಮೆ ನೀಡಿ ಜನರ ಮುಂದೆ ಹೋಗುತ್ತೇನೆ ಎಂದು ಕೇಜ್ರಿವಾಲ್‌ ಹೇಳಿದ್ದರು.. ಅದರಂತ ಇಂದು ಅವರು ರಾಜೀನಾಮೆ ನೀಡುತ್ತಿದ್ದಾರೆ..

 

Share Post