BengaluruPolitics

ಪ್ರಾಸಿಕ್ಯೂಷನ್‌ಗೆ ಅನುಮತಿ ಹಿನ್ನೆಲೆ; ಕಾನೂನು ಪಂಡಿತರ ಜೊತೆ ಸಿದ್ದರಾಮಯ್ಯ ಸಭೆ

ಬೆಂಗಳೂರು; ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆದಿದೆ.. ಪ್ರದೀಪ್‌ ಕುಮಾರ್‌, ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು.. ಮೂವರ ಮನವಿ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.. ಈಗ ಈ ಮೂವರೂ ಕೂಡಾ ರಾಜ್ಯಪಾಲರ ಪತ್ರ ಪಡೆದು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ್ದಾರೆ..
ಇನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಗುತ್ತಿದೆ.. ಕಾನೂನು ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ.. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರ ವಿರುದ್ಧ ಕಾನೂನು ಹೋರಾಟದ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ..
ಬೆಳಗ್ಗೆ ಏನಾಯ್ತು..?
ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿದ್ದಾರೆ.. ಇದರಿಂದಾಗಿ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ ಎದುರಾಗಿದೆ.. ಪ್ರಕರಣದಲ್ಲಿ ಸಿಎಂ ತನಿಖೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ..
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಖಾಸಗಿ ಮನವಿ ಸಲ್ಲಿಸಿದ್ದರು.. ಇದನ್ನು ಪರಿಗಣಿಸಿದ್ದ ರಾಜ್ಯಪಾಲರು, ಸಮಜಾಯಿಷಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು..
ಇದೀಗ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.. ಸರ್ಕಾರ ಈಗ ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಮುಂದಾಗಿದೆ.. ಮುಡಾದಲ್ಲಿ ಸಿಎಂ ಪತ್ನಿಯ ಹೆಸರಿನಲ್ಲಿದ್ದ ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟುಗಳನ್ನು ನೀಡಲಾಗಿತ್ತು.. ಇದರಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

 

Share Post