Politics

ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಅವರೇ ಸಿಎಂ : ಪ್ರಹ್ಲಾದ್‌ ಜೋಶಿ

ನವದೆಹಲಿ : ೨೦೨೩ರ ಚುನಾವಣೆಯವರೆಗೂ ಕರ್ನಾಟಕದ ಮುಖ್ಯಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ ಅವರೇ ಇರಲಿದ್ದಾರೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಮೊನ್ನೆ ಬೊಮ್ಮಾಯಿ ಅವರ ಭಾವನಾತ್ಮಕ ಮಾತುಗಳ ವಿಚಾರವಾಗಿ ಮಾತನಾಡಿದ ಪ್ರಹ್ಲಾದ ಜೋಶಿ, ಬೊಮ್ಮಾಯಿ ಇದೇ ಮೊದಲ ಬಾರಿಗೆ ಹೀಗೆ ಮಾತನಾಡುತ್ತಿಲ್ಲ, ಅವರು ಫಿಲಾಸಫಿಕಲ್ ಆಗಿ ಮಾತನಾಡಿದ್ದಾರೆ ಅಷ್ಟೇ. ಇದನ್ನು ನಾನೇ ಸಾಕಷ್ಟು ಬಾರಿ ನೋಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಬದಲಾವಣೆ ಎಂಬ ಅರ್ಥ ಕಲ್ಪಿಸ ಬೇಡಿ ಎಂದರು.

ಹೈಕಮಾಂಡ್‌ ಮಟ್ಟದಲ್ಲೂ ಕೂಡ ಬೊಮ್ಮಾಯಿ ಬದಲಾವಣೆ ಬಗ್ಗೆ ಯಾವುದೇ ಮಾತುಗಳು ಬಂದಿಲ್ಲ. ಅದರ ಪ್ರಸ್ತಾಪವೂ ನಮ್ಮ ಮುಂದಿಲ್ಲ ಎಂದು ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದರು.

Share Post