Politics

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನಿಗೆ ಗೆಲುವು

ಬೆಳಗಾವಿ:‌ ಜಿದ್ದಿಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ವಿಧಾನಪರಿಷತ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ ಚನ್ನರಾಜ ಹಟ್ಟಿಹೊಳಿಯವರು ಗೆಲುವಿನ ನಗೆ ಬೀರಿದ್ದಾರೆ.

ಇಲ್ಲಿ ಜಾರಕಿಹೊಳಿ ಸಹೋದರರಲ್ಲೊಬ್ಬರಾದ ಲಖನ್‌ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಲಖನ್‌ ಜಾರಕಿಹೊಳಿ ಬಿಜೆಪಿ ಮತಗಳನ್ನು ಸೆಳೆದಿದ್ದರಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರನ ಗೆಲುವಿನ ಹಾದಿ ಸುಗಮವಾಗಿದೆ. ಲಖನ್‌ ಸ್ಪರ್ಧೆಯಿಂದಾಗಿ ಬಿಜೆಪಿ ಮುಗ್ಗಲಮುಳ್ಳಾಗಿದ್ದಾರೆ. ಇದು ದ್ವಿಸದಸ್ಯ ಕ್ಷೇತ್ರವಾದ್ದರಿಂದ ಎರಡನೇ ಸ್ಥಾನದಲ್ಲಿರುವ ಲಖನ್‌ ಜಾರಕಿಹೊಳೀ ಕೂಡಾ ಪರಿಷತ್‌ಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

Share Post