NationalPolitics

ಮೊದಲ ಬಾರಿ ಗೆದ್ದು ಸಿಎಂ ಸ್ಥಾನ ಗಿಟ್ಟಿಸಿಕೊಂಡ ರಾಜಸ್ಥಾನದ ಭಜನ್‌ಲಾಲ್‌

ರಾಜಸ್ಥಾನ; ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಅಧಿಕಾರ ಸ್ವೀಕರಿಸಲಿದ್ದಾರೆ. ಸಂಗನೇರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು ಶಾಸಕರಾಗುತ್ತಿರುವುದು ಇದೇ ಮೊದಲಾಗಿದ್ದು, ಮೊದಲ ಬಾರಿಯೇ ಸಿಎಂ ಆಗುವ ಅವಕಾಶ ಸಿಕ್ಕಿದೆ.

ಬಿಜೆಪಿ ರಾಜಸ್ಥಾನ ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಭಜನ್‌ಲಾಲ್‌ ಸೇವೆ ಸಲ್ಲಿಸುತ್ತಿದ್ದರು. ಭಜನ್‌ಲಾಲ್ ಶರ್ಮಾ ಭರತ್‌ಪುರದಿಂದ ಬಂದಿದ್ದು, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಅವರಿಗೆ ಆಪ್ತರು ಎಂದು ಹೇಳಲಾಗಿದೆ.

ರಾಜಸ್ಥಾನದ ಉಪಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಭೈರ್ವಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಒಟ್ಟು 200 ಸ್ಥಾನಗಳಿವೆ. 199 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ 115 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 69 ಸ್ಥಾನಗಳಿಗೆ ಸೀಮಿತವಾಗಿದೆ.

ಡಿಸೆಂಬರ್ 3 ರಂದು ಬಿಡುಗಡೆಯಾದ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ, ಬಿಜೆಪಿ ಮೂರು ರಾಜ್ಯಗಳಲ್ಲಿ – ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಗೆದ್ದಿದೆ ಮತ್ತು ಎಲ್ಲಾ ಮೂರು ರಾಜ್ಯಗಳಲ್ಲಿ ಹೊಸಬರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದೆ.

ಮೋಹನ್ ಯಾದವ್ ಮಧ್ಯಪ್ರದೇಶದಲ್ಲಿ ಮತ್ತು ವಿಷ್ಣು ದೇವ್ ಸಾಯಿ ಛತ್ತೀಸ್‌ಗಢದಲ್ಲಿ ಸಿಎಂ ಆಗಿದ್ದಾರೆ.

Share Post