NationalPolitics

ಜನವರಿ 30ಕ್ಕೆ ಭಾರತ್ ಜೋಡೋ ಯಾತ್ರೆ ಅಂತ್ಯ; 21 ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ

ನವದೆಹಲಿ; ಸೆಪ್ಟೆಂಬರ್‌ 7ರಂದು ರಾಹುಲ್‌ ಗಾಂಧಿ ಆರಂಭಿಸಿದ್ದ ಭಾರತ್‌ ಜೋಡೋ ಯಾತ್ರೆ ಜನವರಿ 30ಕ್ಕೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲಿ ಶ್ರೀನಗರದಲ್ಲಿ ಬೃಹತ್‌ ರಾಲಿ ನಡೆಯಲಿದೆ. ಇದಕ್ಕೆ ವಿರೋಧ ಪಕ್ಷಗಳ 21 ನಾಯಕರಿಗೆ ಕಾಂಗ್ರೆಸ್‌ ಆಹ್ವಾನ ನೀಡಿದೆ. ಈ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿಕೂಟ ರಚಿಸುವ ಬಗ್ಗೆ ಮುನ್ಸೂಚನೆ ನೀಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, 21 ಪಕ್ಷಗಳ ನಾಯಕರಿಗೆ ಪತ್ರ ಬರೆದಿದ್ದು, ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಜನವರಿ 30 ರಂದು ರ್ಯಾಲಿ ನಡೆಸಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಸಂಸತ್ ಮತ್ತು ಮಾಧ್ಯಮಗಳಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗಿದೆ ಎಂದು ಖರ್ಗೆ ಅವರ ಪತ್ರದಲ್ಲಿ ಉಲ್ಲೇಖಿಸಲಾಗಿದೆ.‌ ಈ ಹಿನ್ನೆಲೆಯಲ್ಲಿ ಯಾತ್ರೆಯು ದೇಶಾದ್ಯಂತ ಲಕ್ಷಾಂತರ ಜನರೊಂದಿಗೆ ನೇರವಾಗಿ ಸಂಪರ್ಕ ಸಾಧಿಸಿದೆ. ಈ ಆಂದೋಲನದಲ್ಲಿ ನಮ್ಮ ಧ್ವನಿಯನ್ನು ನೀಡೋಣ ಎಂದು ಖರ್ಗೆ ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಕೈಗೊಂಡ ಭಾರತ್ ಜೋಡೋ ಯಾತ್ರೆಯು ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾಯಿತು, ಜನವರಿ 30 ರಂದು ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದೆ. ಇಲ್ಲಿಯವರೆಗೆ ಯಾತ್ರೆಯು ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಹರಿಯಾಣ, ಉತ್ತರ ಪ್ರದೇಶ ರಾಜ್ಯಗಳಲ್ಲಿ 3300 ಕಿಲೋಮೀಟರ್‌ಗಳಷ್ಟು ದೂರವನ್ನು ಕ್ರಮಿಸಿದೆ.

Share Post