Politics

ಬೀದರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭೀಮರಾವ್‌ ಪಾಟೀಲ್‌ಗೆ ಗೆಲುವು

ಬೀದರ್‌: ಬೀದರ್‌ ವಿಧಾಪರಿಷತ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭೀಮರಾವ್‌ ಪಾಟೀಲ್‌ ಗೆಲುವು ಸಾಧಿಸಿದ್ದಾರೆ. ಭೀಮರಾವ್‌ ಅವರು 300ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೀದರ್‌ ಗೆಲ್ಲಲೇಬೇಕೆಂದು ಪಣತೊಟ್ಟಿದ್ದ ಬಿಜೆಪಿ ಅಭ್ಯರ್ಥಿಗೆ ಈ ಸೋಲು ಆಘಾತ ತರಿಸಿದೆ.

ಕಾಂಗ್ರೆಸ್‌ ಅಭ್ಯರ್ಥಿ ಭೀಮರಾವ್‌ ಪಾಟೀಲ್‌ ವಿರುದ್ಧ ಗೆಲ್ಲವು ಬಿಜೆಪಿ ಸಾಕಷ್ಟು ಕಸರತ್ತು ನಡೆಸಿತ್ತು. ಬಿಜೆಪಿ ಅಭ್ಯರ್ಥಿ ಪ್ರಕಾಶ್‌ ಖಂಡ್ರೆ, ಗೆಲುವಿಗಾಗಿ ಸಾಕಷ್ಟು ಪ್ರಚಾರ ನಡೆಸಿದ್ದರು. ಆದರೆ ಕಾಂಗ್ರೆಸ್‌ ಅಭ್ಯರ್ಥಿಗೆ ಭೀಮರಾವ್‌ ಪಾಟೀಲ್‌ ಮತದಾರರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

Share Post