NationalPolitics

ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ; ಫೈನಲ್‌ ಆಗುತ್ತಾ ಲಿಸ್ಟ್‌..?

ನವದೆಹಲಿ; ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ದೆಹಲಿಯಲ್ಲಿದ್ದು, ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ. ಇಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮೊದಲ ಪಟ್ಟಿ ಬಗ್ಗೆ ಚರ್ಚೆ ನಡೆಸಲಾಗುತ್ತದೆ.

ಸಂಜೆ ಐದು ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈಗಾಗಲೇ ರಾಜ್ಯ ನಾಯಕರು ಕ್ಷೇತ್ರಕ್ಕೆ ಮೂವರಂತೆ ಸಂಭಾವ್ಯರ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನಿಸಿದ್ದಾರೆ. ಹೈಕಮಾಂಡ್‌ ಚರ್ಚೆ ಮಾಡಿ ಅಂತಿನ ತೀರ್ಮಾನ ಕೈಗೊಳ್ಳಬೇಕಾಗಿದೆ.

Share Post