Politics

ಇಂದೇ ಬಿಜೆಪಿ ಎರಡನೇ ಪಟ್ಟಿ ರಿಲೀಸ್‌; ರಾಜ್ಯದ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌!

ಬೆಂಗಳೂರು; 195 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಬಿಜೆಪಿ ಇದೀಗ ಎರಡನೇ ಪಟ್ಟಿ ರಿಲೀಸ್‌ ಮಾಡೋದಕ್ಕೆ ತಯಾರಿ ನಡೆಸಿದೆ. ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಂಜೆ ವೇಳೆಗೆ ಎರಡನೇ ಪಟ್ಟಿ ರಿಲೀಸ್‌ ಆಗುವುದು ಬಹುತೇಕ ಪಕ್ಕಾ ಆಗಿದೆ. ಕರ್ನಾಟಕದ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗುವುದರಿಂದ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ; ಮೈಸೂರಿಗೆ ʻಯಧುವೀರಾʼಧಿ ವೀರ; ಟಿಕೆಟ್‌ ಬೇಟೆಯ ಹೋಪ್‌ ಕಳೆದುಕೊಳ್ತಾ ʻಸಿಂಹʼ?

ನಡ್ಡಾ, ಮೋದಿ, ಶಾ ನೇತೃತ್ವದಲ್ಲಿ ಮಹತ್ವದ ಸಭೆ;

ನಡ್ಡಾ, ಮೋದಿ, ಶಾ ನೇತೃತ್ವದಲ್ಲಿ ಮಹತ್ವದ ಸಭೆ; ಈಗಾಗಲೇ ಒಂದು ಸುತ್ತಿನ ಮಾತುಕತೆಯಾಗಿದೆ.. ಅಂದುಕೊಂಡಂತೆ ಆಗಿದ್ದರೆ ಭಾನುವಾರವೇ ಸಭೆ ನಡೆದು ಎರಡನೇ ಪಟ್ಟಿ ರಿಲೀಸ್‌ ಆಗಬೇಕಿತ್ತು. ಆದ್ರೆ ಸಭೆಯನ್ನು ಇಂದಿಗೆ ಮುಂದೂಡಲಾಗಿತ್ತು. ಇಂದು ದೆಹಲಿಯಲ್ಲಿ ನಡೆಯುವ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳುತ್ತಿದ್ದಾರೆ. ರಾಜ್ಯದಿಂದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹಾಜರಿರುತ್ತಾರೆ.

ಇದನ್ನೂ ಓದಿ; ಪುನೀತ್‌ ರಾಜ್‌ಕುಮಾರ್‌ ನೆನೆದು ಕಣ್ಣೀರು ಹಾಕಿದ ಸದ್ಗುರು ಜಗ್ಗಿ ವಾಸುದೇವ್‌!

ರಾಜ್ಯದ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ;

ರಾಜ್ಯದ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಇದರಲ್ಲಿ ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗುತ್ತಿದೆ. ಉಳಿದ 25 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.. ಕೆಲವು ಕ್ಷೇತ್ರಗಳಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಲ ಆಕಾಂಕ್ಷಿಗಳಿದ್ದಾರೆ. ಇನ್ನು ಕೆಲ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್‌ ನೀಡಬಾರದು ಎಂಬ ಆಗ್ರಹಗಳು ಕೇಳಿಬರುತ್ತಿವೆ. ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾಮಾರದೆ ಎಚ್ಚರಿಕೆಯ ಹೆಜ್ಜೆ ಇಡಲು ಬಿಜೆಪಿ ಮುಂದಾಗಿದೆ. ಹೀಗಾಗಿ, ಈ ಬಾರಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ, ಉಳಿದ ಹತ್ತು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾದ ಮೇಲೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ.

ಇದನ್ನೂ ಓದಿ;ಮೋದಿ ಮೋದಿ ಅನ್ನೋರಿಗೆ ಮನೆಯಲ್ಲಿ ಊಟ ಹಾಕಬೇಡಿ; ಕೇಜ್ರಿವಾಲ್‌

12 ಹಾಲಿ ಸಂಸದರಿಗೆ ಟಿಕೆಟ್‌ ಕೈತಪ್ಪುವ ಭೀತಿ;

12 ಹಾಲಿ ಸಂಸದರಿಗೆ ಟಿಕೆಟ್‌ ಕೈತಪ್ಪುವ ಭೀತಿ; ರಾಜ್ಯದಲ್ಲಿ ಸದ್ಯ 25 ಬಿಜೆಪಿ ಸಂಸದರಿದ್ದಾರೆ. ಮಂಡ್ಯ ಸಂಸದೆ ಸುಮಲತ ಅವರೂ ಸೇರಿಕೊಂಡರೆ 26 ಸಂಸದರಾಗುತ್ತಾರೆ. ಇದರಲ್ಲಿ 12 ಸಂಸದರಿಗೆ ಟಿಕೆಟ್‌ ನೀಡದಿರಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿಯೇ ಈ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್‌ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಪ್ರತಾಪ ಸಿಂಗ ಅವರಿಗೆ ಬದಲಾಗಿ ಯಧುವೀರ್‌ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇನ್ನು ದಕ್ಷಿಣ ಕನ್ನಡದ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗ್ಡೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಕೋಲಾರ ಸಂಸದ ಮುನಿಸ್ವಾಮಿ, ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಸೇರಿದಂತೆ ಹಲವರಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಇದೆ. ಇದರ ಜೊತೆಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್‌.ಬಚ್ಚೇಗೌಡ, ತುಮಕೂರು ಸಂಸದ ಜಿ.ಎಸ್‌.ಬಸವರಾಜು ಅವರು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ. ಹೀಗಾಗಿ ಇಲ್ಲಿ ಹಲವರು ಟಿಕೆಟ್‌ಗಾಗಿ ಲಾಬಿ ಮಾಡುತ್ತಿದ್ದಾರೆ.

ಇದನ್ನೂ ಓದಿ; ಶಿವಮೊಗ್ಗ ಲೋಕಸಭಾ; ರಾಘವೇಂದ್ರ ಸೋಲಿಸಲು, ಗೀತಾ ಗೆಲ್ಲಿಸಲು ಕಾರಣಗಳೇ ಇಲ್ಲ!

ಕೊನೇ ಹಂತದ ಕಸರತ್ತು ನಡೆಸುತ್ತಿರುವ ಬಿಜೆಪಿ ನಾಯಕರು;

ಕೊನೇ ಹಂತದ ಕಸರತ್ತು ನಡೆಸುತ್ತಿರುವ ಬಿಜೆಪಿ ನಾಯಕರು; ಹಾಗೆ ನೋಡಿದರೆ ಈ ಬಾರಿ ಬಿಜೆಪಿ ವರಿಷ್ಠರು ದಕ್ಷಿಣ ಭಾರತದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಯಾಕಂದ್ರೆ ಉತ್ತರ ಭಾರತದಲ್ಲೇ ಬಿಜೆಪಿಗೆ ಭಾರೀ ಬಹುಮತ ಬರುವ ಸಾಧ್ಯತೆ ಇದೆ.. ಈ ಕಾರಣಕ್ಕಾಗಿಯೇ ತೀರಾ ದಕ್ಷಿಣ ಭಾರತದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದ್ರೆ ಕರ್ನಾಟಕದಲ್ಲಿ ಸಂಪೂರ್ಣ ಕೇಸರಿಮಯ ಮಾಡಬೇಕೆಂಬ ಗುರಿ ಮಾತ್ರ ಬಿಜೆಪಿ ಹೈಕಮಾಂಡ್‌ಗಿದೆ. ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ನಾಯಕರನ್ನು ಜೊತೆಗಿಟ್ಟುಕೊಂಡೇ ಬಿಜೆಪಿಗೆ ಭದ್ರ ಬುನಾದಿ ಹಾಕಲು ಏನೆಲ್ಲಾ ಮಾಡಬೇಕೋ ಅದೆಲ್ಲಾ ಮಾಡುತ್ತಿದ್ದಾರೆ. ಅದರ ಭಾಗವಾಗಿಯೇ ಯಧುವೀರ್‌ ಅವರನ್ನು ರಾಜಕೀಯಕ್ಕೆ ಕರೆತರಲಾಗುತ್ತಿದೆ.

ಇದನ್ನೂ ಓದಿ; ಯುವಕರಲ್ಲಿ ಹೃದಯಾಘಾತ ಹೆಚ್ಚಾಗಲು ಇದೇ ಕಾರಣವಂತೆ!

 

Share Post