Politics

ಉತ್ತರ ಪ್ರದೇಶ ಚುನಾವಣೆ; ಬಿಜೆಪಿ 30 ಸ್ಟಾರ್‌ ಪ್ರಚಾಕರ ಲಿಸ್ಟ್‌ ಬಿಡುಗಡೆ

ನವದೆಹಲಿ: ಐದು ರಾಜ್ಯಗಳ ಚುನಾವಣೆ ರಂಗೇರುತ್ತಿದೆ. ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಹಾಗೂ ಪಟ್ಟಿ ಘೋಷಣೆಯಲ್ಲಿ ಬ್ಯುಸಿಯಾಗಿವೆ. ಅದ್ರಲ್ಲೂ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳಿರುವ ಉತ್ತರ ಪ್ರದೇಶದ ಎಲ್ಲರ ಗಮನ ಸೆಳೆದಿರುವ ರಾಜ್ಯ. ಇಲ್ಲಿ ಎಲ್ಲಾ ಪಕ್ಷಗಳು ತನ್ನದೇ ಆದ ರೀತಿಯಲ್ಲಿ ಪ್ರಚಾರ ಶುರು ಮಾಡಿವೆ. ಇತ್ತ ಆಡಳಿತಾರೂಢ ಬಿಜೆಪಿ ಕೂಡಾ ಸಾಕಷ್ಟು ಕಸರತ್ತು ಮಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಪ್ರಚಾರ ಮಾಡಲು ಬಿಜೆಪಿ ಮೂವತ್ತು ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ,  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಂಸದೆ ಹೇಮಾ ಮಾಲಿನಿ ಸೇರಿ ಹಲವು ನಾಯಕರು ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

Share Post