BengaluruPolitics

ಸತೀಶ್‌ ಜಾರಕಿಹೊಳಿ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ!

ಬೆಂಗಳೂರು; ರಾಜ್ಯ ರಾಜಕೀಯ ಹಲವು ಕುತೂಹಲಗಳಿಗೆ ಕಾರಣವಾಗುತ್ತಿದೆ.. ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರಿಗೆ ಮುಡಾ ಸಂಕಷ್ಟ ಮತ್ತಷ್ಟು ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.. ಸಚಿವ ಸತೀಶ್‌ ಜಾರಕಿಹೊಳಿ ಮುಂದಿನ ಸಿಎಂ ಎಂಬ ಕೂಗು ನಿನ್ನೆಯಷ್ಟೇ ತುಮಕೂರಿನಲ್ಲಿ ಎದ್ದಿತ್ತು.. ಈ ಬಗ್ಗೆ ಚರ್ಚೆಗಳು ಶುರುವಾಗಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.. ಇದು ಹಲವು ಚರ್ಚೆಗಳಿಗೆ ಕಾರಣವಾಗಿದೆ..
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದರು..‌ ತನ್ನ ಕ್ಷೇತ್ರದ ಮುಖಂಡರೊಂದಿಗೆ ಸಚಿವರನ್ನು ಭೇಟಿಯಾದ ವಿಜಯೇಂದ್ರ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದಾರೆ.. ಇದೇ ವೇಳೆ ರಾಜಕೀಯ ಚರ್ಚೆಯೂ ಆಗಿದೆಯಾ ಎಂಬ ಅನುಮಾನ ಮೂಡಿದೆ.. ಯಾಕಂದ್ರೆ ಮುಖಂಡರ ಜೊತೆ ಚರ್ಚೆ ಮಾಡಿದ ಬಳಿಕ, ವಿಜಯೇಂದ್ರ ಅವರು ಸತೀಶ್‌ ಜಾರಕಿಹೊಳಿ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ.. ಈ ಹಿನ್ನೆಲೆಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ..

Share Post