ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣಾ ದಿನಾಂಕ ಘೋಷಣೆ!
ನವದೆಹಲಿ; ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ.. ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗೆ ಚುನಾವಣೆ ದಿನಾಂಕ ಹಾಗೂ ವೇಳಾಪಟ್ಟಿ ಘೋಷಣೆ ಸಂಬಂಧ ಈ ಸುದ್ದಿಗೋಷ್ಠಿ ಕರೆಯಲಾಗಿದೆ.. ಇದರಲ್ಲಿ ಕರ್ನಾಟಕದಲ್ಲಿ ತೆರವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೂ ಚುನಾವಣಾ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ..
ಇದನ್ನೂ ಓದಿ;ನೀವು ಐಟಿ ರಿಟರ್ನ್ ಸಲ್ಲಿಸಿದ್ದೀರಾ..?; 10 ದಿನದಲ್ಲಿ ರೀಫಂಡ್ ಆಗಿಲ್ಲವಾ..?
ಲೋಕಸಭೆಗೆ ಆಯ್ಕೆಯಾಗಿದ್ದರಿಂದಾಗಿ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಸಂಡೂರಿನಲ್ಲಿ ತುಕಾರಾಂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.. ಹೀಗಾಗಿ ಈ ಮೂರೂ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಬೇಕಿದೆ.. ಜಮ್ಮು ಕಾಶ್ಮೀರ ಹಾಗೂ ಹರಿಯಾಣ ಚುನಾವಣೆಯ ಜೊತೆಗೇ ಈ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇದೆ.. ಹೀಗಾಗಿ, ರಾಜ್ಯ ರಾಜಕೀಯ ವಯಲದ ಕಣ್ಣು ಮಧ್ಯಾಹ್ನದ ಸುದ್ದಿಗೋಷ್ಠಿಯ ಮೇಲೆ ನೆಟ್ಟಿದೆ..
ಜಮ್ಮು-ಕಾಶ್ಮೀರ, ಹರಿಯಾಣದ ಜೊತೆಗೆ ಹಲವು ಉಪಚುನಾವಣೆಯ ದಿನಾಂಕಗಳೂ ಘೋಷಣೆಯಾಗುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ; ಬೆಂಗಳೂರಲ್ಲಿ ಮಿಸ್ಡ್‌ಕಾಲ್ ಮಾಯಾಂಗನೆ!; ಯಾಮಾರಿದ್ರೆ ಮುಗೀತು!