BengaluruPolitics

ಉಪಚುನಾವಣೆ; ಚನ್ನಪಟ್ಟಣಕ್ಕೆ ಡಿ.ಕೆ.ಸುರೇಶ್‌, ಸಂಡೂರಿಗೆ ಅನ್ನಪೂರ್ಣ!

ಬೆಂಗಳೂರು; ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿ ನಾಯಕರು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದಾರೆ.. ಆದ್ರೆ ಇನ್ನೂ ಮೈತ್ರಿ ಅಭ್ಯರ್ಥಿ ಘೋಷಣೆಯಾಗಿಲ್ಲ.. ಇಂದು ಘೋಷಣೆಯಾಗುವ ಸಾಧ್ಯತೆ ಇದೆ.. ಇನ್ನು ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಹೇಳಳಲಾಗುತ್ತಿದೆ.. ಆ ಅಚ್ಚರಿ ಅಭ್ಯರ್ಥಿ ಡಿ.ಕೆ.ಸುರೇಶ್‌ ಅನ್ನೋದು ಬಹುತೇಕ ಖಚಿತವಾಗಿದೆ.. ಭಾನುವಾರ ರಾತ್ರಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿ.ಕೆ.ಸುರೇಶ್‌ರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ.. ಒಂದು ವೇಳೆ ಡಿ.ಕೆ.ಸುರೇಶ್‌ ಒಪ್ಪದಿದ್ದರೆ ಮಾತ್ರ ಬೇರೆಯವರನ್ನು ಕಣಕ್ಕಿಳಿಸಲು ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ..
ಮುಖಂಡರ ಅಭಿಪ್ರಾಯವನ್ನು ಸಂಗ್ರಹ ಮಾಡಿ ಈ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ.. ಇನ್ನು ಸಂಡೂರು ಕ್ಷೇತ್ರಕ್ಕೆ ಬಳ್ಳಾರಿ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರ ಹೆಸರು ಬಹುತೇಕ ಕನ್ಫರ್ಮ್‌ ಆಗಿದೆ.. ಇನ್ನು ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್‌ ಆಗಬೇಕಿದ್ದು, ಮೂರು ಕ್ಷೇತ್ರಗಳಿಗೆ ಇವತ್ತು ಅಥವಾ ನಾಳೆ ಅಭ್ಯರ್ಥಿಗಳನ್ನು ಅಂತಿಮ ಮಾಡಿ ಘೋಷಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ..
ಚನ್ನಪಟ್ಟಣ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ.. ಹೀಗಾಗಿ ಯೋಗೇಶ್ವರ್‌ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ.. ಇನ್ನೊಂದೆಡೆ ಜೆಡಿಎಸ್‌ ಅಭ್ಯರ್ಥಿ ಕೂಡಾ ಅಂತಿಮವಾಗಿಲ್ಲ.. ಯೋಗೇಶ್ವರ್‌ ಅವರನ್ನೇ ಜೆಡಿಎಸ್‌ಗೆ ಕರೆತಂದು, ಜೆಡಿಎಸ್‌ ಚಿಹ್ನೆಯಡಿ ಯೋಗೇಶ್ವರ್‌ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ.. ಇನ್ನೊಂದೆಡೆ ಯೋಗೇಶ್ವರ್‌ ಕಾಂಗ್ರೆಸ್‌ ಸೇರಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಬಹುದು ಎಂದೂ ಹೇಳಲಾಗುತ್ತಿದೆ.. ಒಂದೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ..

Share Post