ಯಡಿಯೂರಪ್ಪ ಈ ವಯಸ್ಸಲ್ಲಿ ಹಾಗೆ ಮಾಡಬಹುದಾ?: ಸಿಎಂ ಪ್ರಶ್ನೆ
ಮೈಸೂರು: ಯಡಿಯೂರಪ್ಪ ಅವರಿಗೆ 82 ವರ್ಷ ವಯಸ್ಸು.. ಈ ವಯಸ್ಸಲ್ಲಿ ಅವರ ಮೇಲೆ ಪೋಕ್ಸೋ ಕೇಸ್ ಇದೆ. ಈ ವಯಸ್ಸಲ್ಲಿ ಅವರಿಗೆ ಇದು ಬೇಕಿತ್ತಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೋರ್ಟ್ ದಯೆಯಿಂದ ಅವರು ಹೊರಗಿದ್ದಾರೆ. ಇಲ್ಲದಿದ್ದರೆ ಅವರು ಜೈಲಲ್ಲಿ ಇರಬೇಕಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.
ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದರು. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ..
ಚಿಕ್ಕ ಮಗುವಿನ ಮೇಲೆ ಹೀಗೆ ಮಾಡಬಹುದಿತ್ತಾ, ನನ್ನ ಬಗ್ಗೆ ಮಾತನಾಡುವುದಕ್ಕೆ ಅವರಿಗೆ ಯಾವ ನೈತಿಕ ಹಕ್ಕಿದೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮೂಡ ನಿವೇಶನ ಹಂಚಿಕೆ ವಿಚಾರದಲ್ಲಿ ನಾನು ತಪ್ಪು ಮಾಡಿಲ್ಲ. ರಾಜ್ಯಪಾಲರಿಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಎಲ್ಲ ಬಿಚ್ಚಿಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.