ಇಂದು ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಪ್ರಕರಣ ವಿಚಾರಣೆ!
ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ.. ಈ ಅರ್ಜಿಯ ಆದೇಶ ಇದೇ ವಾರದಲ್ಲಿ, ಅದೂ ಕೂಡಾ ಬುಧವಾರವೇ ಬರುವ ಎಲ್ಲಾ ಸಾಧ್ಯತೆ ಇದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.. ಇಂದು ಮಧ್ಯಾಹ್ನ 3.30ಕ್ಕೆ ಹೈಕೋರ್ಟ್‌ನಲ್ಲಿ ಸಿಎಂ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ಮುಂದುವರೆಯುತ್ತದೆ.. ಇಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟ ವಾದ ಮಂಡನೆ ಮಾಡಲಿದ್ದಾರೆ..
ಇಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಪ್ರಕರಣದ ಬಗ್ಗೆ ಸರ್ಕಾರದ ಕ್ರಮ ಮತ್ತು ತಮ್ಮ ಲೀಗಲ್ ಒಪಿನಿಯನ್ ಅನ್ನು ಸಮರ್ಥನೆ ಮಾಡಿಕೊಳ್ಳಲಿದ್ದಾರೆ.. ಇನ್ನು ಬುಧವಾರ ಸಿಎಂ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡನೆ ಮಾಡಲಿದ್ದಾರೆ.. ಇದಾದ ಮೇಲೆ ಅಂದೇ ಆದೇಶ ಹೊರಬೀಳುವ ಸಾಧ್ಯತೆ ಇದೆ.. ಸಿಎಂ ಪರವಾಗಿ ಆದೇಶ ಬಂದರೆ ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ.. ವಿರುದ್ಧವಾಗಿ ಆದೇಶ ಬಂದರೆ, ಸಿಎಂ ಬದಲಾವಣೆ ಅನಿವಾರ್ಯವಾಗಬಹುದು..