BengaluruPolitics

ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ!; ರಾಷ್ಟ್ರಪತಿ ಭೇಟಿಯಾಗ್ತಾರಾ..?

ಬೆಂಗಳೂರು; ಮುಡಾ ಹಗರಣದಲ್ಲಿ ಕಾನೂನು ಸಂಕಷ್ಟ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.. ನಾಳೆ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು, ರಾಜ್ಯದ ರಾಜಕೀಯ ಬೆಳವಣಿಗೆ ಹಾಗೂ ಮುಡಾ ಕೇಸ್‌ಗೆ ಸಂಬಂಧಿಸಿದ ಬೆಳವಣಿಗೆಯ ಮಾಹಿತಿಯನ್ನು ಹೈಕಮಾಂಡ್‌ ನಾಯಕರಿಗೆ ವಿವರಿಸಲಿದ್ದಾರೆ.. ಜೊತೆ ಈ ಕುರಿತಂತೆ ಹೋರಾಟವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಸಲುವಾಗಿಯೂ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ವೃದ್ಧೆಯನ್ನೂ ಬಿಡದ ಕಾಮುಕ!; ಚಿಂತಾಮಣಿ ಆಸ್ಪತ್ರೆಯಲ್ಲಿ ಪೈಶಾಚಿಕ ಕೃತ್ಯ!

ಇನ್ನು ರಾಜ್ಯಪಾಲರು ತಾರತಮ್ಯ ಮಾಡುತ್ತಿದ್ದಾರೆಂದು ರಾಷ್ಟ್ರಪತಿಗೆ ಸಿದ್ದರಾಮಯ್ಯ ದೂರು ಕೊಡುವ ಸಾಧ್ಯತೆ ಕೂಡಾ ಇದೆ ಎಂದು ಹೇಳಲಾಗುತ್ತಿದೆ.. ದೆಹಲಿಯಲ್ಲಿ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿಯಾಗಿ, ರಾಜ್ಯಪಾಲರು ರಾಜಕೀಯ ಒತ್ತಡದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.. ನನ್ನ ವಿರುದ್ಧ ಯಾವುದೇ ತನಿಖೆಯೂ ಆಗಿಲ್ಲ.. ಖಾಸಗಿ ದೂರಿನ ಹಿನ್ನೆಲೆಯಲ್ಲಿ ಈ ಆದೇಶ ಕೊಟ್ಟಿದ್ದಾರೆ.. ಆದ್ರೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ವಿರುದ್ಧದ ಪ್ರಕರಣಗಳ ತನಿಖೆಯಾಗಿ ದೋಷಾರೋಪ ಸಲ್ಲಿಸುವ ಹಂತಕ್ಕೆ ಬಂದಿವೆ.. ಆದ್ರೆ ಈ ಬಗ್ಗೆ ತನಿಖಾಧಿಕಾರಿಗಳೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿದ್ದರೂ ರಾಜ್ಯಪಾಲರು ಆ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ರಾಷ್ಟ್ರಪತಿಗೆ ಸಿದ್ದರಾಮಯ್ಯ ದೂರು ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.. ಆದ್ರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇದನ್ನೂ ಓದಿ; ಸ್ಕ್ರೂ ಡ್ರೈವರ್‌ನಿಂದ ಪತ್ನಿಯನ್ನು ಚುಚ್ಚಿ ಚುಚ್ಚಿ ಕೊಂದ ಪಾಪಿ!

Share Post