ಪ್ರಧಾನಿಗೆ 2ನೇ ಪತ್ರ ಬರೆದ ಸಿಎಂ ಸಿದ್ದರಾಮಯ್ಯ; ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿಗೆ ಮನವಿ!
ಬೆಂಗಳೂರು; ಅಶ್ಲೀಲ ವಿಡಿಯೋ ಪ್ರಕರಣ ಬಯಲಾಗುತ್ತಿದ್ದಂತೆ ಆಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿ ಹೋಗಿ ಕುಳಿತುಕೊಂಡಿದ್ದಾರೆ.. ಎಷ್ಟೇ ನೋಟಿಸ್ ಜಾರಿ ಮಾಡಿದರೂ ಕೇರ್ ಮಾಡುತ್ತಿಲ್ಲ.. ಅವರು ಅಲ್ಲಿಂದ ವಾಪಸ್ ಬರುತ್ತಿಲ್ಲ.. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ.. ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಪ್ರಧಾನಿಗೆ ಬರೆದ ಎರಡನೇ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ..
ಈ ಹಿಂದೆಯೂ ಕೂಡಾ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರ ಬರೆದಿದ್ದರು.. ಇದೀಗ ಎರಡನೇ ಪತ್ರ ಬರೆದು ಪ್ರಜ್ವಲ್ ಅವರಿಗೆ ನೀಡಿರುವ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.. ಪಾಸ್‌ಪೋರ್ಟ್ ಆಕ್ಟ್ 1967ನ ಸೆಕ್ಷನ್ 10(3)(h) ಅಡಿ ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡಬೇಕು.. ಇದರಿಂದಾಗಿ ಪ್ರಜ್ವಲ್ ಅವರನ್ನು ಭಾರತಕ್ಕ ಕರೆತರಲು ಅನುಕೂಲವಾಗುತ್ತದೆ ಎಂದು ಪ್ರಧಾನಿ ಮೋದಿಯವರನ್ನು ಸಿದ್ದರಾಮಯ್ಯ ಕೋರಿದ್ದಾರೆ..
FIR ದಾಖಲಾಗುವ ಕೆಲ ಗಂಟೆಗಳಿಗೂ ಮುನ್ನ ಪ್ರಜ್ವಲ್ ರೇವಣ್ಣ ದೇಶ ತೊರೆದಿದ್ದಾರೆ.. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ.