BengaluruPolitics

ಸಿಎಂ ರಾಜೀನಾಮೆ ಕೊಡೋದಿಲ್ಲ; ಗೃಹ ಸಚಿವ ಡಾ.ಜಿ.ಪರಮೇಶ್ವರ್‌

ಬೆಂಗಳೂರು; ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡೋದಿಲ್ಲ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ನೋಟಿಸ್‌ ಕೊಟ್ಟಿದ್ದರು.. ಅದಕ್ಕೆ ನಾವು ಉತ್ತರ ಕೊಟ್ಟಿದ್ದೆವು.. ಹೀಗಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡೋದಿಲ್ಲ ಎಂದು ಅಂದುಕೊಂಡಿದ್ದೆವು. ಆದ್ರೆ ಬಿಜೆಪಿಯವರ ಒತ್ತಡದಿಂದ ರಾಜ್ಯಪಾಲರ ಕಚೇರಿ ದುರುಪಯೋಗವಾಗಿದೆ ಎನಿಸುತ್ತಿದೆ ಎಂದು ಜಿ.ಪರಮೇಶ್ವರ್‌ ಅವರು ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡೋದಿಲ್ಲ. ನಾವು ಪ್ರಾಸಿಕ್ಯೂಷನ್‌ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ.. ಈಗಾಗಲೇ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ.. ಎಲ್ಲರೂ ಒಗ್ಗಟ್ಟಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆ ಎಂದು ಪರಮೇಶ್ವರ್‌ ಹೇಳಿದ್ದಾರೆ.. ಇನ್ನು ಸಚಿವರಾದ ದಿನೇಶ್‌ ಗುಂಡೂರಾವ್‌ ಹಾಗೂ ಚಲುವರಾಯಸ್ವಾಮಿ ಕೂಡಾ ಇದೇ ಮಾತನ್ನು ಹೇಳಿದ್ದಾರೆ..

Share Post