ಕೆ. ಎಸ್. ಈಶ್ವರಪ್ಪ ರಾಜೀನಾಮೆ ಕೋರಿ ಕಾಂಗ್ರೆಸ್ ಪಟ್ಟು : ಇಲ್ಲವಾದರೆ ಪ್ರತಿಭಟನೆ
ಬೆಂಗಳೂರು : ರಾಷ್ಟ್ರಧ್ವಜದ ಕಿಚ್ಚು ತೀವ್ರ ಮಟ್ಟವನ್ನು ತಲುಪುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ರಾಷ್ಟ್ರಧ್ವಜ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಕೆ,ಎಸ್.ಈಶ್ವರಪ್ಪನವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.
ಕಾಂಗ್ರೆಸ್‌ನವರು ಕೆ ಎಸ್ ಈಶ್ವರಪ್ಪನವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಈ ವಿಷಯವಾಗಿ ಟ್ವೀಟ್ ಮುಖಾಂತರ ಸರ್ಕಾರಕ್ಕೆ ತಿಳಿಸಿದ್ದಾರೆ. ಇಂದು ಬೆಳಗ್ಗೆ 11ಗಂಟೆಯೊಳಗೆ ಸಚಿವ ಈಶ್ವರಪ್ಪನವರನ್ನು ಸಚಿವ ಸ್ಥಾನದಿಂದ ವಜಾಗೊಳಿಸದಿದ್ದರೆ ಉಭಯ ಸದನದಲ್ಲಿಯೂ ಉಗ್ರವಾದ ಪ್ರತಿಭಟನೆ ಮಾಡುವೆವು ಎಂದು ಕಾಂಗ್ರೆಸ್ ಎಚ್ಚರಿಸಿದೆ.
ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ತಿಳಿಸಿದೆ. ನೆನ್ನೆ ನಲಪಾಡ್ ನೇತೃತ್ವದಲ್ಲಿ ಯೂತ್ ಕಾಂಗ್ರೆಸ್ ಕೆ ಎಸ್ ಈಶ್ವರಪ್ಪನವರ ಮನೆ ಮುಂದೆ ಪ್ರತಿಭಟನೆ ನಡೆಸಿದೆ.
ಇಂದು ಕಾಂಗ್ರೆಸ್‌ನವರು ಒಂದು ಸಭೆ ಮಾಡಿಕೊಂಡು ನಂತರ ಸದನಕ್ಕೆ ಬರಲಿದ್ದಾರೆ. ಒಂದು ವೇಳೆ ಸದನದಲ್ಲಿ ಈ ವಿಚಾರವಾಗಿ ಚರ್ಚೆಗೆ ಅವಕಾಶ ನೀಡದಿದ್ದರೆ ಅಹೋರಾತ್ರಿ ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಎಚ್ಚರಿಸಿದೆ.
ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ 11 ಗಂಟೆಯೊಳಗೆ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರೆಸುತ್ತೇವೆ.
1/13#ದೇಶದ್ರೋಹಿಈಶ್ವರಪ್ಪ #ದೇಶದ್ರೋಹಿಬಿಜೆಪಿ— Siddaramaiah (@siddaramaiah) February 16, 2022