Politics

ರಾಜ್ಯದ 14 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳು ಫೈನಲ್‌; ಇಂದೇ ಮೊದಲ ಪಟ್ಟಿ ರಿಲೀಸ್‌!

ನವದೆಹಲಿ; ಲೋಕಸಭಾ ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ 195 ಕ್ಷೇತ್ರಗಳಿಗೆ ತನ್ನ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿ ಕೂಡಾ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಅದೂ ಕೂಡಾ ರಿಲೀಸ್‌ ಆಗಲಿದೆ. ಹೀಗಿರುವಾಗಲೇ ಕಾಂಗ್ರೆಸ್‌ ಕೂಡಾ ಮೊದಲ ಪಟ್ಟಿಗೆ ರಿಲೀಸ್‌ ಮಾಡೋದಕ್ಕೆ ಕಸರತ್ತು ಮಾಡುತ್ತಿದೆ. ಗುರುವಾರ ತಡರಾತ್ರಿವರೆಗೂ ಕಾಂಗ್ರೆಸ್‌ ನಾಯಕರು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಬಿಸಿಬಿಸಿ ಚರ್ಚೆ ನಡೆಸಿದ್ದಾರೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ನಿನ್ನೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಇದನ್ನೂ ಓದಿ; ಕೊಡಗು-ಮೈಸೂರು ಕ್ಷೇತ್ರಕ್ಕೆ ಯಧುವೀರ್‌ ಬಿಜೆಪಿ ಅಭ್ಯರ್ಥಿಯಾಗ್ತಾರಾ..?

14 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌, ಸಚಿವರಿಗೂ ಟಿಕೆಟ್‌!;

14 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌, ಸಚಿವರಿಗೂ ಟಿಕೆಟ್‌!; ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ನಿನ್ನೆ ನಡೆದ ಸಭೆಯಲ್ಲಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗಿದೆ. ಇದರಲ್ಲಿ ಕೆಲ ಸಚಿವರನ್ನೂ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಹಳೇ ಮೈಸೂರು ಭಾಗದ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕದಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಕೆ.ಜೆ.ಜಾರ್ಜ್‌ ಪಾಲ್ಗೊಂಡಿದ್ದರು.

ಇದನ್ನೂ ಓದಿ; Rameshwaram Cafe Case; ಆರೋಪಿ ಧರಿಸಿದ್ದ ಟೋಪಿ ಪತ್ತೆ; ಶಂಕಿತನ ಬಗ್ಗೆ ಮಹತ್ವದ ಸುಳಿವು!

ಶೇ.50 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ;

ಶೇ.50 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ; ಕರ್ನಾಟಕ, ಕೇರಳ, ತೆಲಂಗಾಣ, ಛತ್ತೀಸ್​​ಘಡ್, ದೆಹಲಿ, ಲಕ್ಷದ್ವೀಪದ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ದೆಹಲಿ ಸಭೆಯಲ್ಲಿ ಚರ್ಚೆ ನಡೆದಿದೆ.. ಇದರಲ್ಲಿ ಶೇಕಡಾ 50 ಸ್ಥಾನಗಳಿಗೆ ಟಿಕೆಟ್‌ ಫೈನಲ್‌ ಆಗಿದೆ ಎಂದು ಹೇಳಲಾಗುತ್ತಿದೆ. ಸಾಧ್ಯವಾದರೆ ಇವತ್ತೇ ಮೊದಲ ಪಟ್ಟಿ ರಿಲೀಸ್‌ ಮಾಡೋದಕ್ಕೆ ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಬಿಜೆಪಿ ಮೊದಲ ಪಟ್ಟಿ ರಿಲೀಸ್‌ ಮಾಡಿದ್ದು, ಎಡರನೇ ಪಟ್ಟಿ ಕೂಡಾ ಸಿದ್ಧ ಮಾಡಿದೆ. ಹೀಗಾಗಿ, ಕಾಂಗ್ರೆಸ್‌ ಒಂದು ಪಟ್ಟಿಯನ್ನಾದರೂ ರಿಲೀಸ್‌ ಮಾಡುವ ತವಕದಲ್ಲಿದೆ. ಅದಕ್ಕಾಗಿ ಅಳೆದೂತೂಗಿ, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮ ಮಾಡಲಾಗಿದೆ. ಇಂದು ಮತ್ತೊಂದು ಸುತ್ತಿನ ಚರ್ಚೆಯ ನಂತರ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ; ಭಾರತದ ಐವರು ಶ್ರೀಮಂತ ಮಹಿಳೆಯರು ಯಾರು ಗೊತ್ತಾ..?

ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆ.ಸಿ.ವೇಣುಗೋಪಾಲ್‌ ಹೇಳಿದ್ದೇನು..?;

ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆ.ಸಿ.ವೇಣುಗೋಪಾಲ್‌ ಹೇಳಿದ್ದೇನು..?; ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಿತು. ಮೊದಲ ಪಟ್ಟಿಯನ್ನು ನಾವು ಸಿದ್ಧ ಮಾಡಿದ್ದೇವೆ. ಕೇರಳ, ಕರ್ನಾಟಕ, ತೆಲಂಗಾಣ, ಚತ್ತೀಸ್​​​​ಘಡ್​​​, ದೆಹಲಿ ಮತ್ತು ಲಕ್ಷದ್ವೀಪ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಮಾಡಿದ್ದೇವೆ. ಶೀಘ್ರದಲ್ಲೇ ಮೊದಲ ಪಟ್ಟಿ ರಿಲೀಸ್‌ ಮಾಡಲಿದ್ದೇವೆ ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

ಇದನ್ನೂ ಓದಿ; Health tips; ಸ್ವೀಟ್ಸ್‌ ಅಂದ್ರೆ ನಿಮಗೆ ಇಷ್ಟಾನಾ..?; ಹೀಗೆ ತಿನ್ನಿ ಏನೂ ಆಗಲ್ಲ!

ಬೇಡವೇ ಬೇಡ ಅಮೇಥಿ, ವಯನಾಡ್‌ ಸಾಕು!;

ಬೇಡವೇ ಬೇಡ ಅಮೇಥಿ, ವಯನಾಡ್‌ ಸಾಕು!; ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಳೆದ ಬಾರಿ ಉತ್ತರ ಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯನಾಡಿನಲ್ಲಿ ಸ್ಪರ್ಧೆ ಮಾಡಿದ್ದರು. ಆದ್ರೆ ಅಮೇಥಿಯಲ್ಲಿ ಅವರು ಸೋಲನುಭವಿಸಿದರು. ಈಗ ಮತ್ತೆ ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧಿ ಮಾಡುತ್ತಾರಾ ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆದ್ರೆ ಅದಕ್ಕೆ ಉತ್ತರ ಸಿಕ್ಕಿದೆ. ಅಮೇಥಿ ಬೇಡವೇ ಬೇಡ, ವಯನಾಡಿನಲ್ಲಿ ಮಾತ್ರ ಸ್ಪರ್ಧೆ ಮಾಡಲು ರಾಹುಲ್‌ ಗಾಂಧಿ ಸಿದ್ಧವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದಹಾಗೆ ರಾಹುಲ್‌ ಗಾಂಧಿಯವರು ತೆಲಂಗಾಣದ ಖಮ್ಮಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಅವರು ವಯನಾಡಿನಿಂದಲೇ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; Health Benefits; ದಿನಾ ಹೀಗೆ ಮಾಡಿ, ಯಾವ ರೋಗವೂ ನಿಮ್ಮ ಹತ್ತಿರ ಬರೋಲ್ಲ..!

Share Post