Politics

ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ; ರಾಜ್ಯದ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್‌!

ಬೆಂಗಳೂರು; ಲೋಕಸಭಾ ಚುನಾವಣೆಗೆ ಸಿದ್ಧತೆಗಳು ನಡೆದಿವೆ.. ಎಲ್ಲಾ ಪಕ್ಷಗಳೂ ಅಭ್ಯರ್ಥಿಗಳ ಆಯ್ಕೆ, ಘೋಷಣೆಯಲ್ಲಿ ನಿರತವಾಗಿವೆ.. ಕಾಂಗ್ರೆಸ್‌ ಪಕ್ಷ ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದೆ.. ಮೊದಲನೇ ಪಟ್ಟಿಯಲ್ಲಿ ರಾಜ್ಯದ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು.. ಈಗ ಮೂರನೇ ಪಟ್ಟಿನಲ್ಲಿ ರಾಜ್ಯದ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುತ್ತೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಬಗ್ಗೆ ಕುತೂಹಲ ಹೆಚ್ಚಾಗಿದೆ.

ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ;

ಇಂದು ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ನಡೆಯಲಿದೆ.. ರಾಜ್ಯದಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.. ಇಂದು ರಾಜ್ಯದ ಸುಮಾರು 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯ ಮೂರು ಕ್ಷೇತ್ರಗಳು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮೈಸೂರು ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳನ್ನು ಅಂತಿಮ ಮಾಡಬಹುದು ಎಂದು ಹೇಳಲಾಗುತ್ತಿದೆ.. ಹೀಗಾಗಿ ಇಂದಿನ ಸಭೆ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಸಂಜೆಯೊಳಗೆ ಪಟ್ಟಿ ರಿಲೀಸ್‌ ಸಾಧ್ಯತೆ;

ಇಂದು ಸಂಜೆಯೊಳಗೆ ಸಭೆ ಮುಕ್ತಾಯವಾಗಲಿದೆ. ಸಭೆಯ ನಂತರ ಅಂದರೆ ರಾತ್ರಿ ವೇಳೆಗೆ ಪಟ್ಟಿ ರಿಲೀಸ್‌ ಮಾಡುವ ಸಾಧ್ಯತೆ ಇದೆ.. ಕಾಂಗ್ರೆಸ್‌ಗೆ ಕೆಲ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳು ಸಿಗುತ್ತಿಲ್ಲ.. ಹೀಗಾಗಿ ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ವಂಚನೆಗೊಳಗಾದವರ ಮನವೊಲಿಸಿ ಪಕ್ಷಕ್ಕೆ ಕರೆತಂದು ಟಿಕೆಟ್‌ ನೀಡುವ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.. ಹೀಗಾಗಿಯೇ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್‌ ಮಾಡದೇ ಹಾಗೇಯೇ ಉಳಿಸಿಕೊಳ್ಳಲಾಗುತ್ತದೆ. ಇಂದು 10 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳು ಫೈನಲ್‌ ಆಗಲಿದ್ದಾರೆ. ಈ ಹಿಂದೆ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿತ್ತು. ಉಳಿದಂತೆ 11 ಕ್ಷೇತ್ರಗಳು ಉಳಿಯಲಿದ್ದು, ಅದಕ್ಕೆ ಅಳೆದೂತೂಗಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಮೈಸೂರು ಅಭ್ಯರ್ಥಿ ಬಗ್ಗೆ ಗೊಂದಲ ಸೃಷ್ಟಿ;

ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೊದಲಿಗೆ ಸಿಎಂ ಪುತ್ರ ಯತೀಂದ್ರ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿತ್ತು. ಆಂತರಿಕ ಸಮೀಕ್ಷೆ ನಂತರ ಯತೀಂದ್ರ ಬೇಡ ಎನ್ನುವ ತೀರ್ಮಾನಕ್ಕೆ ಬರಲಾಗಿದೆ.. ಹೀಗಾಗಿ ಲಕ್ಷ್ಮಣ್‌ ಹೆಸರು ಬಲವಾಗಿ ಕೇಳಿ ಬಂದಿತ್ತು., ಆದ್ರೆ ಬಿಜೆಪಿ ನಾಯಕರ ಕವೀಶ್‌ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.. ಹೀಗಾಗಿ ಕವೀಶ್‌ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಅಭ್ಯರ್ಥಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕವೀಶ್‌ ಅವರ ತಂದೆ ವಾಸು ಕಾಂಗ್ರೆಸ್‌ನಲ್ಲಿದ್ದರು. ಆದ್ರೆ ಕವೀಶ್‌ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 50 ಸಾವಿರದಷ್ಟು ಮತಗಳನ್ನು ಕವೀಶ್‌ ಗಳಿಸಿದ್ದರು.

 

 

Share Post