BengaluruPolitics

ಮುಜುಗರ ತಪ್ಪಿಸಲು ಸಿಎಂ ರಾಜೀನಾಮೆ ಕೇಳುತ್ತಾ ಕಾಂಗ್ರೆಸ್‌ ಹೈಕಮಾಂಡ್‌..?

ಬೆಂಗಳೂರು; ಮುಡಾ ಹಗರಣ ವಿಚಾರವಾಗಿ ಜನಪ್ರತಿನಿಧಿಗಳ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇಂದು ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸುವ ಸಾಧ್ಯತೆ ಇದೆ.. ಈ ನಡುವೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡಗಳು ಹೆಚ್ಚಾಗಿವೆ.. ಬಿಜೆಪಿ ನಾಯಕರು ಸಿಎಂ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ.. ಇನ್ನು ಹರಿಯಾಣ, ಜಮ್ಮು-ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ.. ಈ ಚುನಾವಣಾ ಪ್ರಚಾರದ ವೇಳೆ ಮೋದಿ ಸೇರಿದಂತೆ ಬಿಜೆಪಿ ನಾಯಕರು ಮುಡಾ ವಿಚಾರವನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್‌ ವಿರುದ್ಧ ಹರಿಹಾಯುತ್ತಿದ್ದಾರೆ.. ಇದು ಕಾಂಗ್ರೆಸ್‌ಗೆ ಮುಜುಗರ ತರಿಸಿದೆ..

ಮುಡಾ ವಿಚಾರ ಈಗ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ.. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಮಾತನಾಡುತ್ತಿದ್ದಾರೆ.. ಕೋರ್ಟ್‌ ವಿಚಾರಣೆಗೆ ಆದೇಶ ಮಾಡಿದರೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿಲ್ಲ ಎಂದು ಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಿದ್ದಾರೆ.. ಇದು ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಜುಗರ ತರಿಸಿದೆ.. ಬೇರೆ ಯಾರಾದರೂ ಸಿಎಂ ಆಗಿದ್ದಿದ್ದರೆ ಇಷ್ಟೊತ್ತಿಗೆ ಅವರ ರಾಜೀನಾಮೆ ಪಡೆಯುತ್ತಿದ್ದರೇನೋ.. ಆದ್ರೆ ಸಿದ್ದರಾಮಯ್ಯ ಶಕ್ತಿ ಏನು ಅನ್ನೋದು ಕಾಂಗ್ರೆಸ್‌ ಹೈಕಮಾಂಡ್‌ಗೆ ಗೊತ್ತಿದೆ.. ಸಿದ್ದರಾಮಯ್ಯ ಅವರಿಗೆ ಇರುವ ಜನಬಲ ಹಾಗೂ ಶಾಸಕರ ಬಲದ ಕಾರಣದಿಂದಾಗಿ ಸಿದ್ದರಾಮಯ್ಯರಿಂದ ರಾಜೀನಾಮೆ ಪಡೆಯಲು ಕಾಂಗ್ರೆಸ್‌ ಹೈಕಮಾಂಡ್‌ ಹಿಂದೇಟು ಹಾಕುತ್ತಿದೆ..

ಆದ್ರೆ ಸದ್ಯ ನಾಲ್ಕು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ.. ಮುಂದೆ ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಚುನಾವಣೆ ಎದುರಾಗಲಿದೆ.. ಈ ಚುನಾವಣೆಗಳ ಮೇಲೆ ಮುಡಾ ಹಗರಣದ ವಿಚಾರ ಪರಿಣಾಮ ಬೀರುವ ಸಾಧ್ಯತೆ ಇದೆ.. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಮುಜುಗರ ಆಗಿದೆ.. ಆದರೂ ಕೂಡಾ ಒಲ್ಲದ ಮನಸ್ಸಿನಿಂದಲೇ ಸಿಎಂ ಸಿದ್ದರಾಮಯ್ಯ ಪರವಾಗಿ ಹೈಕಮಾಂಡ್‌ ನಿಂತಂತೆ ತೋರಿಸುತ್ತಿದೆ ಎನ್ನಲಾಗುತ್ತಿದೆ.. ಹೀಗಿರುವಾಗಲೇ ರಾಜ್ಯ ಕಾಂಗ್ರೆಸ್‌ನಲ್ಲೂ ಈಗ ಅಪಸ್ವರಗಳು ಕೇಳಿಬರುತ್ತಿವೆ.. ಕಾಂಗ್ರೆಸ್‌ನ ಹಿರಿಯ ನಾಯಕ ಕೋಳಿವಾಡ ಅವರು ಕೂಡಾ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಒಳ್ಳೆಯದು ಎಂದಿದ್ದಾರೆ.. ಹೀಗಾಗಿ ಅನಿವಾರ್ಯ ಪರಿಸ್ಥಿತಿ ಬಂದರೆ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳಬಹುದು ಎಂದು ಹೇಳಲಾಗುತ್ತಿದೆ..

 

Share Post