ಕಾಂಗ್ರೆಸ್ ಪಕ್ಷ 1700 ಕೋಟಿ ತೆರಿಗೆ ಕಟ್ಟಿಲ್ಲವಂತೆ!; ನೋಟಿಸ್ ಜಾರಿ!
ನವದೆಹಲಿ; ಕಾಂಗ್ರೆಸ್ ಪಕ್ಷದ ನಾಯಕರು ನಮ್ಮ ಪಕ್ಷದ ಅಕೌಂಟ್ ಗಳನ್ನು ಸೀಜ್ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದರು.. ಇದರ ಬೆನ್ನಲ್ಲೇ ಕಾಂಗ್ರೆಸ್ ಮತ್ತೊಂದು ಸಂಕಷ್ಟ ಎದುರಾಗಿದೆ.. ಆದಾಯ ತೆರಿಗೆ ಇಲಾಖೆ ಬಾಕಿ ಉಳಿಸಿಕೊಂಡಿರುವ ತೆರಿಗೆ ಹಣ ಪಾವತಿ ಮಾಡುವಂತೆ ನೋಟಿಸ್ ನೀಡಿದೆ..
ಇದನ್ನೂ ಓದಿ; ರೆಫ್ರಿಜರೇಟರ್ ಸ್ವಚ್ಛ ಮಾಡದೇ ಹೋದರೆ ಏನಾಗುತ್ತೆ..?; ಫ್ರಿಡ್ಜ್ ಕ್ಲೀನ್ ಮಾಡೋದು ಹೇಗೆ..?
1700 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡ ಕಾಂಗ್ರೆಸ್!;
ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.. ಇದನ್ನು ಪಾವತಿ ಮಾಡುವಂತೆ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.. 2017-18ರಿಂದ 2020-21ರ ಅಸೆಸ್ಮೆಂಟ್ ವರ್ಷಕ್ಕೆ ಆದಾಯ ತೆರಿಗೆ ಬಾಕಿ ಉಳಿಸಿಕೊಳ್ಳಲಾಗಿದೆ.. ಆ ಹಣಕ್ಕೆ ಬಡ್ಡಿ, ದಂಡ ಸೇರಿ ಒಟ್ಟು 1,700 ಕೋಟಿ ರೂಪಾಯಿ ಆಗಿದೆ.. ಹೀಗಾಗಿ ಕೂಡಲೇ ಈ ಹಣವನ್ನು ಪಾವತಿ ಮಾಡುವಂತೆ ನೋಟಿಸ್‌ನಲ್ಲಿ ಹೇಳಲಾಗಿದೆ..
ಇದನ್ನೂ ಓದಿ; ಚಿಕ್ಕಬಳ್ಳಾಪುರ ಲೋಕಸಭಾ; ಜನಕ್ಕೆ ʻರಕ್ಷಾʼ ಬೇಕು.. ನಾಯಕರಿಗೆ ʻಮೊಯ್ಲಿʼ ಬೇಕು..!
ನೋಟಿಸ್ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಕಾಂಗ್ರೆಸ್;
ಆದಾಯ ತೆರಿಗೆ ಇಲಾಖೆ ನೋಟಿಸ್ ಗಳನ್ನು ಪದೇ ಪದೇ ಕಳುಹಿಸುತ್ತಿತ್ತು.. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ದೆಹಲಿ ಹೈಕೋರ್ಟ್ ಮೊರೆಹೋಗಿತ್ತು.. ನೋಟಿಸ್ ಕಳುಹಿಸದಂತೆ ಸೂಚಿಸಬೇಕೆಂದು ಮನವಿ ಮಾಡಲಾಗಿತ್ತು.. ಆದ್ರೆ, ಹೈಕೋರ್ಟ್ ಈ ಅರ್ಜಿಯನ್ನು ನಿನ್ನೆ ತಿರಸ್ಕಾರ ಮಾಡಿತ್ತು.. ಇದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಮತ್ತೊಂದು ನೋಟಿಸ್ ಜಾರಿ ಮಾಡಿದೆ.. 1700 ಕೋಟಿ ರೂಪಾಯಿ ತೆರಿಗೆ ಕಟ್ಟುವಂತೆ ಸೂಚನೆ ನೀಡಿದೆ..
ಇದನ್ನೂ ಓದಿ; ಬೆವರು ದುರ್ವಾಸನೆಯಿಂದ ರೋಸಿಹೋಗಿದ್ದೀರಾ..?; ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ..
ಅಕೌಂಟ್ ಮುಟ್ಟುಗೋಲು ಹಾಕಿಕೊಂಡಿದ್ದಕ್ಕೆ ವಿರೋಧ;
ಇತ್ತೀಚೆಗೆ ರಾಹುಲ್ ಗಾಂಧಿ, ಸೋನಿಯಾಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೋಷ್ಠಿ ನಡೆಸಿದ್ದರು.. ಪಕ್ಷದ ಬ್ಯಾಂಕ್ ಖಾತೆಗಳನ್ನು ಐಟಿ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದಾಗಿ ನಾವು ಹಣ ತೆಗೆಯಲು ಅಗುತ್ತಿಲ್ಲ. ಚುನಾವಣೆಗೆ ಪಕ್ಷದ ವತಿಯಿಂದ ಖರ್ಚು ಮಾಡಲು ಹಣವಿಲ್ಲ.. ಜಾಹೀರಾತು ಕೊಡಲು ಕೂಡಾ ನಮ್ಮ ಬಳಿ ಹಣವಿಲ್ಲ ಎಂದು ಹೇಳಿದ್ದರು.. ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು.. ಇದರ ಜೊತೆಗೆ ಕೋರ್ಟ್ ಮೊರೆ ಕೂಡಾ ಹೋಗಿದ್ದರು..
ಇದನ್ನೂ ಓದಿ; ಮಾನಸಿಕ ಒತ್ತಡದಲ್ಲಿದ್ದೀರಾ..?; ಹಾಗಾದರೆ ಈ ಮಂತ್ರಗಳನ್ನು ಜಪಿಸಿ!