ಒಟ್ಟು 24 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್; 12 ಕಡೆ ಮಕ್ಕಳು, ಸಂಬಂಧಿಕರಿಗೇ ಮಣೆ!
ಬೆಂಗಳೂರು; ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ರಾಜ್ಯದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ.. ಮೊದಲ ಪಟ್ಟಿಯಲ್ಲಿ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿತ್ತು.. ಇದರಿಂದಾಗಿ ರಾಜ್ಯದ 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲಾಗಿದೆ.. ಇದರಲ್ಲಿ ಅರ್ಧದಷ್ಟು ಅಂದ್ರೆ 12 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ನಾಯಕರ ಸಂಬಂಧಿಕರನ್ನೇ ಕಣಕ್ಕಿಳಿಸಲಾಗಿದೆ.. ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಹೆಚ್ಚು ಒತ್ತು ನೀಡಿದೆ..
ಇದನ್ನೂ ಓದಿ; Breaking; ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅರೆಸ್ಟ್
ಸಚಿವರ ಮಕ್ಕಳು, ನಾಯಕರ ಸಂಬಂಧಿಗಳಿಗೆ ಟಿಕೆಟ್:
==============================
ಗೀತಾ ಶಿವರಾಜ್ ಕುಮಾರ್ (ಶಿವಮೊಗ್ಗ ಕ್ಷೇತ್ರ) – ಸಚಿವ ಮಧು ಬಂಗಾರಪ್ಪ ಸಹೋದರಿ
ವೆಂಕಟರಮಣೇಗೌಡ (ಮಂಡ್ಯ ಕ್ಷೇತ್ರ) – ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಸಹೋದರ
ಶ್ರೇಯಸ್ ಪಟೇಲ್ (ಹಾಸನ ಕ್ಷೇತ್ರ) – ಮಾಜಿ ಸಂಸದ ದಿ. ಪುಟ್ಟಸ್ವಾಮಿ ಗೌಡರ ಮೊಮ್ಮಗ
ಮೃಣಾಲ್ ಹೆಬ್ಬಾಳಕರ್(ಬೆಳಗಾವಿ ಕ್ಷೇತ್ರ) – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ
ಪ್ರಿಯಾಂಕ ಜಾರಕಿಹೊಳಿ (ಚಿಕ್ಕೋಡಿ ಕ್ಷೇತ್ರ) – ಸಚಿವ ಸತೀಶ್ ಜಾರಕಿಹೊಳಿ ಪುತ್ರಿ
ಸಂಯುಕ್ತ ಪಾಟೀಲ್(ಬಾಗಲಕೋಟೆ ಕ್ಷೇತ್ರ) – ಸಚಿವ ಶಿವಾನಂದ ಪಾಟೀಲ್ ಪುತ್ರಿ
ಸಾಗರ್ ಖಂಡ್ರೆ (ಬೀದರ್ ಕ್ಷೇತ್ರ) – ಸಚಿವ ಈಶ್ವರ್ ಖಂಡ್ರೆ ಪುತ್ರ
ರಾಜಶೇಖರ್ ಹಿಟ್ನಾಳ್ (ಕೊಪ್ಪಳ ಕ್ಷೇತ್ರ) – ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ
ಸೌಮ್ಯ ರೆಡ್ಡಿ (ಬೆಂಗಳೂರು ದಕ್ಷಿಣ) – ಸಚಿವ ರಾಮಲಿಂಗಾರೆಡ್ಡಿ ಪುತ್ರಿ
ಪ್ರಭಾವತಿ ಮಲ್ಲಿಕಾರ್ಜುನ್ (ದಾವಣಗೆರೆ ಕ್ಷೇತ್ರ) – ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ
ಮನ್ಸೂರ್ ಖಾನ್ (ಬೆಂಗಳೂರು ಕೇಂದ್ರ ಕ್ಷೇತ್ರ) – ಮಾಜಿ ಸಚಿವ ರೆಹಮಾನ್ ಖಾನ್ ಪುತ್ರ
ಡಾ. ರಾಧಾಕೃಷ್ಣ ದೊಡ್ಡಮನಿ (ಕಲಬುರಗಿ ಕ್ಷೇತ್ರ) – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ
ಇದನ್ನೂ ಓದಿ; Breaking; ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್
ಅಭ್ಯರ್ಥಿಗಳು ಹೆಣಗಾಡಿತಾ ಕಾಂಗ್ರೆಸ್ ಪಕ್ಷ..?;
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆದ್ದು ಮಾನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಕಾಂಗ್ರೆಸ್ ನಾಯಕರಿಗಿದೆ.. ಹೀಗಾಗಿಯೇ ರಾಜ್ಯದಲ್ಲಿರುವ ಹಾಲಿ ಸಚಿವರನ್ನೇ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದರು.. ಆದ್ರೆ ಯಾವೊಬ್ಬ ಸಚಿವನೂ ಇದಕ್ಕೆ ರೆಡಿ ಇರಲಿಲ್ಲ.. ಇದರಿಂದಾಗಿ ವಿಧಿ ಇಲ್ಲದೆ ಸಚಿವರ ಮಕ್ಕಳು, ನಾಯಕರ ಸಂಬಂಧಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಘೋಷಣೆಯಾಗಿರುವ 24 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳು, ನಾಯಕರ ಸಂಬಂಧಿಕರೇ ಅಖಾಡಕ್ಕಿಳಿಯುತ್ತಿದ್ದಾರೆ.
ಇದನ್ನೂ ಓದಿ; ಅತ್ತಿಗುಪ್ಪೆಯಲ್ಲಿ ಮೆಟ್ರೋ ಟ್ರೈನಿಗೆ ಸಿಲುಕಿ ಯುವಕ ಸಾವು!
7 ಸಚಿವರ ಮಕ್ಕಳು, ಸಂಬಂಧಿಗಳು ಅಖಾಡಕ್ಕೆ;
ಕಾಂಗ್ರೆಸ್ ಪಕ್ಷ ಕರ್ನಾಟಕ ಸರ್ಕಾರದ ಏಳು ಸಚಿವರ ಮಕ್ಕಳು ಹಾಗೂ ಸಂಬಂಧಿಕರಿಗೆ ಟಿಕೆಟ್ ಘೋಷಣೆ ಮಾಡಿದೆ.. ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್‌ಕುಮಾರ್ ಕುಮಾರ್ ಅವರನ್ನು ಕಣಕ್ಕಿಳಿಸಲಾಗಿದೆ.. ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುತ್ರ ಮೃಣಾಲ್ ಹೆಬ್ಬಾಳಕರ್, ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಚುನಾವಣಾ ಕಣಕ್ಕಿಳಿದಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಪುಕ್ತಾ ಪಾಟೀಲ್‌ಗೆ ಟಿಕೆಟ್ ನೀಡಲಾಗಿದೆ.. ಬೀದರ್ ಕ್ಷೇತ್ರದಲ್ಲಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಅಖಾಡಕ್ಕಿಳಿದಿದ್ದಾರೆ.. ಇನ್ನು ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಯವರನ್ನು ಕಣಕ್ಕಿಳಿಸಲಾಗಿದೆ. ದಾವಣಗೆರೆ ಕ್ಷೇತ್ರದಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾವತಿ ಮಲ್ಲಿಕಾರ್ಜುನ್ ಅವರನ್ನು ಅಖಾಡಕ್ಕಿಳಿಸಲಾಗಿದೆ.
ಇದನ್ನೂ ಓದಿ; Detox Water: ಡೆಟಾಕ್ಸ್ ವಾಟರ್‌ನಿಂದ ದೇಹದಲ್ಲಿನ ಮಲಿನಗಳೆಲ್ಲಾ ದೂರ!
5 ನಾಯಕರ ಸಂಬಂಧಿಗಳಿಗೂ ಸಿಕ್ತು ಅವಕಾಶ;
ಸಚಿವರ ಮಕ್ಕಳು, ಸಂಬಂಧಿಗಳಲ್ಲದೆ ಐದು ನಾಯಕರ ಸಂಬಂಧಿಕರು, ಮಕ್ಕಳಿಗೂ ಲೋಕಸಭಾ ಚುನಾವಣೆಯಲ್ಲಿ ಅವಕಾಶ ಸಿಕ್ಕಿದೆ.. ಕಲಬುರಗಿಯಿಂದ ಈ ಬಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಖಾಡಕ್ಕಿಳಿಯುತ್ತಿಲ್ಲ. ಬದಲಾಗಿ ಅವರ ಅಳಿಯ ಡಾ.ರಾಧಾಕೃಷ್ಣ ದೊಡ್ಡಮನಿಯವರಿಗೆ ಟಿಕೆಟ್ ನೀಡಲಾಗಿದೆ ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಗೌಡ ಸಹೋದರ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರಿಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಲು ಕಾಂಗ್ರೆಸ್ ಅವಕಾಶ ನೀಡಿದೆ.. ಇನ್ನು ಹಾಸನ ಕ್ಷೇತ್ರದಿಂದ ಮಾಜಿ ಸಂಸದ ದಿ. ಪುಟ್ಟಸ್ವಾಮಿ ಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಶಾಸಕ ರಾಘವೇಂದ್ರ ಹಿಟ್ನಾಳ್ ಸಹೋದರ ರಾಜಶೇಖರ ಹಿಟ್ನಾಳ್ ಅವರಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.. ಇನ್ನು ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಅವರಿಗೆ ಅವಕಾಶ ನೀಡಲಾಗಿದೆ.
ಇದನ್ನೂ ಓದಿ; ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪರಿಷತ್ ಸ್ಥಾನಕ್ಕೆ ರಾಜೀನಾಮೆ!