NationalPolitics

ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿಣಿ; ಲೋಕಸಭಾ ಚುನಾವಣಾ ಗೆಲುವಿಗೆ ತಯಾರಿ

ನವದೆಹಲಿ; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಒಂದು ಕಡೆ INDIA ಒಕ್ಕೂಟದ ಸಭೆ ನಡೆಸಲಾಗುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷ ಕೂಡಾ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಇದಕ್ಕಾಗಿ ಇದೇ ಗುರುವಾರ ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ ಆಯೋಜಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜ್ಯ ಪರವಾಗಿ ಪಾಲ್ಗೊಳ್ಳಲಿದ್ದಾರೆ.

ಎಲ್ಲಾ ರಾಜ್ಯಗಳ ಪ್ರಮುಖ ನಾಯಕರನ್ನು ಕರೆದು ಸಭೆ ಮಾಡಲಾಗುತ್ತಿದೆ, ಎಐಸಿಸಿ ವರ್ಕಿಂಗ್‌ ಕಮಿಟಿ ಸಭೆ ಇದಾಗಿದ್ದು, ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್‌ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಹೇಗಾದರೂ ಮಾಡಿ ಗೆಲ್ಲಬೇಕು ಎಂದು ಪಣ ತೊಟ್ಟಿದೆ. ಇದಕ್ಕಾಗಿ ಈಗಿನಿಂದಲೇ ತಂತ್ರಗಾರಿಕೆ ಶುರು ಮಾಡಿದೆ.

 

Share Post