ಇವಿಎಂ-ವಿವಿಪ್ಯಾಟ್‌ಗಳ ಕ್ರಾಸ್ ಚೆಕ್ ವಿಚಾರ; ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್
ವಿದ್ಯುನ್ಮಾನ ಮತಯಂತ್ರಗಳಿಂದ (ಇವಿಎಂ) ದಾಖಲಾದ ಶೇಕಡಾ 100 ರಷ್ಟು ಮತಗಳನ್ನು ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಸ್ಲಿಪ್‌ಗಳೊಂದಿಗೆ ತಾಳೆ ಮಾಡಬೇಕೆಂದು ಕೋರಿ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಅಲ್ಲದೆ, ಬ್ಯಾಲೆಟ್ ಪೇಪರ್ ಮತದಾನ ಕೋರಿ ಸಲ್ಲಿಸಿದ್ದ ಅರ್ಜಿದಾರರ ಬೇಡಿಕೆಯನ್ನು ಕೂಡಾ ನ್ಯಾಯಾಲಯ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.
ಚುನಾವಣಾ ಫಲಿತಾಂಶ ಪ್ರಕಟವಾದ ಏಳು ದಿನಗಳೊಳಗೆ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ. ನಂತರ ಇವಿಎಂಗಳ ಮೈಕ್ರೋಕಂಟ್ರೋಲರ್ ಪ್ರೋಗ್ರಾಂ ಅನ್ನು ಎಂಜಿನಿಯರ್‌ಗಳ ತಂಡದೊಂದಿಗೆ ಪರಿಶೀಲಿಸಬಹುದು.