ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಬೆನ್ನಲ್ಲೇ ಮಹತ್ವದ ಸಭೆ ನಡೆಸಿದ ಡಿ.ಕೆ.ಶಿವಕುಮಾರ್!
ಬೆಂಗಳೂರು; ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕೂಗು ಎದ್ದಿದೆ.. ಒಬ್ಬರಿಗೆ ಒಂದೇ ಹುದ್ದೆಯನ್ನು ಪಾಲಿಸಲು ಕಾಂಗ್ರೆಸ್ ಹೈಕಮಾಂಡ್ ಕೂಡಾ ನಿರ್ಧಾರ ಮಾಡಿದ್ದು, ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.. ಆದ್ರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಕುತೂಹಲಕ್ಕೆ ಕಾರಣವಾಗಿದೆ..
ಇಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಕಾಂಗ್ರೆಸ್ ಪದಾಧಿಕಾರಿಗಳ ಜೊತೆ ಸಭೆಗಳನ್ನು ನಡೆಸಿದರು.. ರಾಜ್ಯದಲ್ಲಿ ಪಕ್ಷ ಬಲಪಡಿಸುವ ದೃಷ್ಟಿಯಿಂದ ಹಾಗೂ ಮುಂಬರುವ ಉಪಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಭೆ ನಡೆಸಲಾಗಿದ್ದು, ಇದರಲ್ಲಿ ಆಕ್ಷನ್ ಪ್ಲ್ಯಾನ್ ಸಿದ್ಧ ಮಾಡಲಾಗಿದೆ ಎಂದು ತಿಳಿದುಬಂದಿದೆ..
ವಲಯವಾರು ಸತ್ಯ ಶೋಧನಾ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದ್ದು, ಲೋಕಸಭೆ ಫಲಿತಾಂಶದ ಹಿನ್ನಡೆ ಬಗ್ಗೆ ವಿಚಾರಣೆ ನಡೆಸಲು ವಲಯವಾರು ಪ್ರತ್ಯೇಕ ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ರೂಪುರೇಷೆ ಸಿದ್ದಪಡಿಸಲು ವಲಯವಾರು ಸಮಿತಿ, ಬಿಬಿಎಂಪಿ, ಜಿಪಂ, ತಾಪಂ ಚುನಾವಣೆಗೆ ಹಾಗೂ ಉಪ ಚುನಾವಣೆಯಲ್ಲಿ ಸಕ್ರಿಯ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.. ಪ್ರತಿ ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರವಾರು ಸಂಚಾಲನ ಸಮತಿ ರಚನೆಗೂ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ..