BengaluruPolitics

ಮತ್ತೆ ದಲಿತ ಸಿಎಂ ವಿಚಾರ ಮುನ್ನೆಲೆಗೆ; ಏನಂತಾರೆ ಜಾರಕಿಹೊಳಿ?

ಬೆಂಗಳೂರು; ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ.. ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಬದಲಾವಣೆಯಾದರೆ ದಲಿತ ನಾಯಕನಿಗೆ ಸಿಎಂ ಪಟ್ಟ ಕಟ್ಟಬೇಕೆಂಬ ಕೂಗು ಎದ್ದಿದೆ.. ಈ ವಿಚಾರವಾಗಿ ಈಗಾಗಲೇ ಚರ್ಚೆ ಜೋರಾಗಿದೆ..

  ಮಲ್ಲಿಕಾರ್ಜುನ ಖರ್ಗೆ, ಸತೀಶ್ ಜಾರಕಿಹೊಳಿ, ಜಿ ಪರಮೇಶ್ವರ್ ಹೆಸರು ಜೋರಾಗಿ ಕೇಳಿಬರುತ್ತಿದೆ.. ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಈ ಮೂವರಲ್ಲಿ ಒಬ್ಬರಿಗೆ ಸಿಎಂ ಸ್ಥಾನ ಸಿಗುತ್ತೆ ಎಂದು ಹೇಳಲಾಗುತ್ತಿದೆ.. ಈ ನಡುವೆ ದಲಿತ ಸಿಎಂ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ..

   ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.. ಈ ವೇಳೆ ದಲಿತ ಸಿಎಂ ಚರ್ಚೆ ಅನವಶ್ಯಕ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.. ತನಿಖೆಗೆ ಆದೇಶ ನೀಡಿದ್ದರೂ ಸಿದ್ದರಾಮಯ್ಯ ರಾಜೀನಾಮೆಗೆ ಯಾವುದೇ ಒತ್ತಡ ಇಲ್ಲ.. ಹೀಗಾಗಿ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ.. ಈಗ ದಲಿತ ಸಿಎಂ ಚರ್ಚೆ ಅನವಶ್ಯಕ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ..

ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ರಾಜ್ಯದ ಎಲ್ಲ ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದೂ ಜಾರಕಿಹೊಳಿ ಹೇಳಿದ್ದಾರೆ.

Share Post