CrimePolitics

ರಾಜ್ಯಪಾಲರ ನೋಟಿಸ್‌ ವಾಪಸ್‌ ಪಡೆಯುವಂತೆ ಒತ್ತಾಯಿಸಿ ನಿರ್ಣಯ!

ಬೆಂಗಳೂರು; ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರು ನೀಡಿರುವ ನೋಟಿಸ್‌ ಬಗ್ಗೆ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.. ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೋಟಿಸ್‌ ಹಿಂಪಡೆಯುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.. ಇನ್ನು ಈ ಬಗ್ಗೆ ಕಾನೂನು ಹೋರಾಟ ನಡೆಸುವ ಬಗ್ಗೆಯೂ ತೀರ್ಮಾನ ಮಾಡಲಾಗಿದೆ..

ಇದನ್ನೂ ಓದಿ; ಕುಳಿತಲ್ಲೇ ಪ್ರಾಣ ಬಿಟ್ಟ ಗಾರೆ ಕೆಲಸಗಾರ; ಮಾರನೆ ದಿನದವರೆಗೂ ಗೊತ್ತಾಗಲೇ ಇಲ್ಲ!

ಮುಡಾದಲ್ಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.. ಈ ಹಿನ್ನೆಯಲ್ಲಿ ರಾಜ್ಯಪಾಲರು ನೋಟಿಸ್‌ ಜಾರಿ ಮಾಡಿದ್ದರು.. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಚಿಂತನೆ ನಡೆಸಿದ್ದಾರೆ.. ಈ ಹಿನ್ನೆಲೆಯಲ್ಲಿ ನೊಟಿಸ್‌ ಜಾರಿ ಮಾಡಿದ್ದರು.. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ರಾಜ್ಯಪಾಲರ ನೋಟಿಸ್​ಗೆ ಸಚಿವ ಸಂಪುಟ ವಿರೋಧಿಸಿದೆ.. ಅಲ್ಲದೇ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಲು ನಿರ್ಣಯ ಕೈಗೊಂಡಿದೆ. ಇದರ ಕಾನೂನು ಹೋರಾಟ ಮಾಡೋದಕ್ಕೂ ನಿರ್ಧಾರ ಕೈಗೊಳ್ಳಲಾಗಿದೆ..

ಇದನ್ನೂ ಓದಿ; ತಾನೇ ಬಟ್ಟೆ ಹರಿದುಕೊಂಡು ಯುವಕನ ಮೇಲೆ ಆರೋಪ ಮಾಡಿದ ಮಹಿಳೆ!

Share Post