Politics

ದೇವೇಗೌಡರು, ಕುಮಾರಸ್ವಾಮಿ ಸೋತಿದ್ದ ಕ್ಷೇತ್ರದಲ್ಲಿ ಡಾ.ಮಂಜುನಾಥ್‌ ಗೆಲ್ತಾರಾ..?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ… ಈ ಕ್ಷೇತ್ರ ವ್ಯಾಪ್ತಿಯಲ್ಲಿ ರಾಮನಗರ, ರಾಜರಾಜೇಶ್ವರಿ ನಗರ, ಕುಣಿಗಲ್‌, ಆನೇಕಲ್‌, ಮಾಗಡಿ, ಕನಕಪುರ ಹಾಗೂ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳು ಬರಲಿವೆ..  ಈ ಕ್ಷೇತ್ರದಲ್ಲಿ ಈ ಬಾರಿ ಬಿಗ್‌ ಫೈಟ್‌ ನಡೆದಿದೆ.. ಕಾಂಗ್ರೆಸ್‌ ಪಕ್ಷದಿಂದ ಮೂರನೇ ಬಾರಿ ಆಯ್ಕೆ ಬಯಸಿ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ ಅಖಾಡದಲ್ಲಿದ್ದಾರೆ.. ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಡಾ.ಸಿ.ಎನ್‌.ಮಂಜುನಾಥ್‌ ಕಣಕ್ಕಿಳಿದಿದ್ದಾರೆ.. ಸಿ.ಎನ್‌.ಮಂಜುನಾಥ್‌ ಅವರಿಗೆ ರಾಜಕೀಯ ಹೊಸದಾದರೂ ಸಮಾಜದಲ್ಲಿ ಒಳ್ಳೆಯ ಇಮೇಜ್‌ ಇದೆ.. ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್‌ ಎರಡೂ ಪಕ್ಷಗಳ ಸಪೋರ್ಟ್‌ ಇದೆ.. ಜೊತೆಗೆ ದೇವೇಗೌಡರ ಅಳಿಯ ಆಗಿರುವುದರಿಂದ ಗೌಡರ ಬೆಂಬಲಿಗ ಮತಗಳೂ ಸಿಗಲಿವೆ.. ಆದರೂ  ಕೂಡಾ ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಜೊತೆ ಸೆಣಸಾಡಿ ಗೆಲ್ಲುವುದು ಅವರಿಗೆ ಸುಲಭದ ಮಾತೇನಲ್ಲ..

ಇದನ್ನೂ ಓದಿ; ಅಮಿತ್‌ ಶಾ ಬಂದು ಹೋದ ಮೇಲೆ ರಾಜ್ಯದಲ್ಲಿ ಬದಲಾದ ರಾಜಕೀಯ ಚಿತ್ರಣ!

ದೇವೇಗೌಡರು ಹಾಗೂ ಕುಮಾರಸ್ವಾಮಿ ಕೂಡಾ ಸೋತಿದ್ದರು..!;

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ 2008ಕ್ಕೂ ಮೊದಲು ಕನಕಪುರ ಲೋಕಸಭಾ ಕ್ಷೇತ್ರವಾಗಿತ್ತು. 2008ರಲ್ಲಿ ಕ್ಷೇತ್ರಗಳ ಮರುವಿಂಗಡನೆಯಾದ ಮೇಲೆ ಕನಕಪುರ ಲೋಕಸಭಾ ಕ್ಷೇತ್ರ ತೆಗೆದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಮಾಡಲಾಯಿತು.. ಅಂದಹಾಗೆ ಕನಕಪುರ ಲೋಕಸಭಾ ಕ್ಷೇತ್ರ ಇದ್ದಾಗ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಯವರೇ ಸೋತಿದ್ದರು… ದೇವೇಗೌಡರು ಒಂದು ಮೂರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.. ಇನ್ನು ಕುಮಾರಸ್ವಾಮಿಯವರು ಕೂಡಾ ಎರಡು ಬಾರಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು.. ಕನಕಪುರ ಲೋಕಸಭಾ ಕ್ಷೇತ್ರಕ್ಕೂ ಬೆಂಗಳೂರು ಗ್ರಾಮಾಂತರ  ಲೋಕಸಭಾ ಕ್ಷೇತ್ರಕ್ಕೂ ದೊಡ್ಡ ವ್ಯತ್ಯಾಸಗಳೇನೂ ಇಲ್ಲ.. ಒಂದೆರಡು ವಿಧಾನಸಭಾ ಕ್ಷೇತ್ರಗಳು ಬದಲಾಗಿವೆ ಅಷ್ಟೇ.. ಇದರ ಜೊತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಆದ ಮೇಲೆ ಕಾಂಗ್ರೆಸ್‌ ಜಾಸ್ತಿ ಗೆದ್ದಿದೆ.. ಹೀಗಾಗಿ, ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಸೋತ ಕ್ಷೇತ್ರದಲ್ಲಿ ಡಾ.ಸಿ.ಎನ್‌.ಮಂಜುನಾಥ್‌ ಗೆಲ್ಲುಲು ಸಾಕಷ್ಟು ಬೆವರು ಹರಿಸಬೇಕಾಗುವುದು ಅನಿವಾರ್ಯ.

ಇದನ್ನೂ ಓದಿ; Breaking; ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಬೆಂಬಲಿಸಲು ಸುಮಲತಾ ನಿರ್ಧಾರ

ಅಂದು ತೇಜಸ್ವಿನಿ ಪಡೆದಿದ್ದ ಮತಗಳೆಷ್ಟು..?

2004ರ ಲೋಕಸಭಾ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರ ಇತ್ತು.. ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ಸಾತನೂರು, ಉತ್ತರಹಳ್ಳಿ, ಮಳವಳ್ಳಿ ಹಾಗೂ ಆನೇಕಲ್‌ ವಿಧಾನಸಭಾ ಕ್ಷೇತ್ರಗಳು ಇದರ ವ್ಯಾಪ್ತಿಯಲ್ಲಿದ್ದವು.. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ತೇಜಸ್ವಿನಿ ಶ್ರೀರಮೇಶ್‌ 584238 ಮತಗಳನ್ನು ಪಡೆದು ವಿಜಯಶಾಲಿಯಾದರು. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ರಾಮಚಂದ್ರಗೌಡರು 467575 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.. ಇನ್ನು ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಮಾಜಿ ಪ್ರಧಾನಿ ದೇವೇಗೌಡರು 462320 ಮತಗಳನ್ನಷ್ಟೇ ಪಡೆಯಲು ಶಕ್ತರಾದರು.. ಅಂದರೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.. ಆದ್ರೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ದೇವೇಗೌಡರು ಗೆದ್ದು ಲೋಕಸಭೆ ಪ್ರವೇಶ ಮಾಡಿದರು.. ಆ ಚುನಾವಣೆಯಲ್ಲಿ ದೇವೇಗೌಡರು ಕನಕಪುರ ಹಾಗೂ ಹಾಸನ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರು..

ಇದನ್ನೂ ಓದಿ; ಅತಿಯಾದ ಆತ್ಮವಿಶ್ವಾಸ ಬಿಜೆಪಿಗೆ ಮುಳುವಾಗುತ್ತಾ..?; ಪ್ರಶಾಂತ್‌ ಕಿಶೋರ್‌ ಬಿಜೆಪಿಗೆ 370 ಸೀಟು ಬರಲ್ಲ ಎಂದಿದ್ದೇಕೆ..?

ಎರಡು ಬಾರಿ ಸೋಲನುಭವಿಸಿದ್ದ ಕುಮಾರಸ್ವಾಮಿ;

1999ರ ಕನಕಪುರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ವಿ.ಚಂದ್ರಶೇಖರ ಮೂರ್ತಿಯವರು 532910 ಮತಗಳನ್ನು ಪಡೆದು ಜಯಶಾಲಿಯಾಗಿದ್ದರು.. ಅಂದು ಬಿಜೆಪಿ ಅಭ್ಯರ್ಥಿಯಾಗಿದ್ದ ಎಂ.ಶ್ರೀನಿವಾಸ್‌ ಅವರು 498893 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು.. ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್‌.ಡಿ.ಕುಮಾರಸ್ವಾಮಿಯವರು ಅಂದು ಕೇವಲ 1 ಲಕ್ಷ 62 ಸಾವಿರದ 448 ಮತಗಳನ್ನಷ್ಟೇ ಗಳಿಸಲು ಶಕ್ತರಾಗಿದ್ದರು..
ಇನ್ನು 1998ರ ಕನಕಪುರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಂ.ಶ್ರೀನಿವಾಸ್‌ ಅವರು 470387 ಮತಗಳನ್ನು ಪಡೆದು ಜಯಶಾಲಿಯಾಗಿದ್ದರು. ಅಂದು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಡಾ.ಪ್ರೇಮಚಂದ್ರಸಾಗರ್‌ ಅವರು 453946 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದರು.. ಇನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಹೆಚ್‌.ಡಿ.ಕುಮಾರಸ್ವಾಮಿಯವರು 2,60,859 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದರು.. ಆದ್ರೆ, ಅದಕ್ಕೂ ಮೊದಲು 1996ರಲ್ಲಿ ನಡೆದ ಚುನಾವಣೆಯಲ್ಲಿ ಕುಮಾರಸ್ವಾಮಿಯವರು 44,04,444 ಮತಗಳನ್ನು ಪಡೆದು ಜಯಶಾಲಿಯಾಗಿದ್ದರು.. ಅಂದು ಕಾಂಗ್ರೆಸ್‌ ಪಕ್ಷದ ಎಂ.ವಿ.ಚಂದ್ರಶೇಖರ ಮೂರ್ತಿಯವರು 333040 ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದರು..

ಇದನ್ನೂ ಓದಿ; Episode-1; ರಾಜಕಾರಣಿಗಳ ಗುಣವನ್ನು ಜನ ಸಾಮಾನ್ಯರು ಅಳವಡಿಸಿಕೊಂಡರೆ ಏನಾಗುತ್ತೆ..?

2008ರಲ್ಲಿ ಕ್ಷೇತ್ರ ಮರುವಿಂಗಡಣೆ;

2008ರಲ್ಲಿ ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯಾಯಿತು.. ಆಗ ಕನಕಪುರ ಲೋಕಸಭಾ ಕ್ಷೇತ್ರವನ್ನು ತೆಗೆದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಎಂದು ಮಾಡಲಾಯಿತು.. ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಆನೇಕಲ್‌ ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಗೆ ಬಂದವು.. ಇದರ ಜತೆಗೆ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರವೂ ಇದಕ್ಕೆ ಸೇರ್ಪಡೆಯಾಯಿತು.. ಆದ್ರೆ ಮಳವಳ್ಳಿ ಕ್ಷೇತ್ರ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಹೋದರೆ, ಉತ್ತರಹಳ್ಳಿ ಕ್ಷೇತ್ರ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸೇರ್ಪಡೆಯಾಯಿತು.

ಇದನ್ನೂ ಓದಿ; ಕೆಂಪು ಮೊಟ್ಟೆ ಒಳ್ಳೆಯದಾ..?, ಬಿಳಿ ಮೊಟ್ಟೆ ಒಳ್ಳೆಯದಾ..?; ತಜ್ಞರು ಏನು ಹೇಳುತ್ತಾರೆ..?

Share Post